ಅಹ್ಮದಾಬಾದ್:ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನವೊಂದು ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಪತನಗೊಂಡ ದುರಂತದ ಸ್ಥಳಕ್ಕೆ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಕಾರ್ಯದರ್ಶಿಯೂ ಆದ ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್, ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ಘಟಕದ ಅಧ್ಯಕ್ಷ ಪವನ್ ಖೇರಾ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಶನಿವಾರ ಸಂಜೆ ಭೇಟಿ ನೀಡಿದರು.ಈ ದುರಂತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನಾಯಕರು, ಸ್ಥಳದಲ್ಲಿ ಪರಿಶೀಲನೆ ನಡೆಸಿ, ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.