ಬೆಂಗಳೂರು: ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಎಸ್. ಲಾಡ್ ಅವರು ರಾಯಚೂರಿನ ರಾಯಚೂರು ಥರ್ಮಲ್ ಪವರ್ ಸ್ಟೇಷನ್ (ಆರ್‌ಟಿಪಿಎಸ್), ಯರಮರಸ್ ಥರ್ಮಲ್ ಪವರ್ ಸ್ಟೇಷನ್ (ವೈಟಿಪಿಎಸ್), ಕುಡುತಿನಿಯ ಬಳ್ಳಾರಿ ಥರ್ಮಲ್ ಪವರ್ ಸ್ಟೇಷನ್ (ಬಿಟಿಪಿಎಸ್) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಕಾರ್ಮಿಕರ ಸಮಸ್ಯೆಗಳ ಕುರಿತು ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವರವಾಗಿ ಚರ್ಚಿಸಿದರು.
ಸಭೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕಾರ್ಮಿಕ ಆಯುಕ್ತ ಡಾ. ಎಚ್. ಎನ್. ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತ ಮಂಜುನಾಥ್, ಉಪ ಕಾರ್ಮಿಕ ಆಯುಕ್ತ ವೆಂಕಟೇಶ್ ಸಿಂದಿಹಟ್ಟಿ, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಇಂಧನ ಇಲಾಖೆಯ ಅಪರ ಕಾರ್ಯದರ್ಶಿ, ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಸಂಘದ ಪ್ರಮುಖರು ಹಾಗೂ ಗುತ್ತಿಗೆದಾರರು ಭಾಗವಹಿಸಿದ್ದರು.
ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಮಗ್ರ ಚರ್ಚೆ ನಡೆಸಲಾಯಿತು. ಕಾರ್ಮಿಕರ ಕಲ್ಯಾಣ ಮತ್ತು ಕೆಲಸದ ವಾತಾವರಣವನ್ನು ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಚಿವರು ಸೂಚನೆಗಳನ್ನು ನೀಡಿದರು.