ಬೆಂಗಳೂರು, ರಾಜಭವನ: ಎಸ್ಟೋನಿಯಾದ ಭಾರತ ರಾಯಭಾರಿ ಶ್ರೀಮತಿ ಮಾರ್ಜೆ ಲುಪ್ ಅವರ ನೇತೃತ್ವದ ನಿಯೋಗವು ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿತು.
ಈ ಭೇಟಿಯಲ್ಲಿ ಇಬ್ಬರೂ ನಾಯಕರ ನಡುವೆ ಭಾರತ-ಎಸ್ಟೋನಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವ ಕುರಿತು ಚರ್ಚೆ ನಡೆಯಿತು. ತಂತ್ರಜ್ಞಾನ, ವ್ಯಾಪಾರ, ಶಿಕ್ಷಣ ಮತ್ತು ಸಾಂಸ್ಕೃತಿಕ ಸಹಕಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವದ ಸಾಧ್ಯತೆಗಳ ಬಗ್ಗೆ ಚರ್ಚಿಸಲಾಗಿದೆ.
ರಾಜಭವನದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಇತರ ಹಿರಿಯ ಅಧಿಕಾರಿಗಳು ಮತ್ತು ನಿಯೋಗದ ಸದಸ್ಯರೂ ಉಪಸ್ಥಿತರಿದ್ದರು.