ಕನಕಪುರ: ಕನಕಪುರ ಟೌನ್‌ನ ತುಗಣಿ ಗೇಟ್‌ನಿಂದ ನಾರಾಯಣಪ್ಪ ಕೆರೆಯವರೆಗೆ 35 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 4.5 ಕಿಲೋಮೀಟರ್ ಉದ್ದದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಮೂಲ್ ಅಧ್ಯಕ್ಷ ಮತ್ತು ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಅವರು ಸೋಮವಾರ ಸಂಜೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯ ಪ್ರಗತಿ ಮತ್ತು ಗುಣಮಟ್ಟವನ್ನು ಎಚ್ಚರಿಕೆಯಿಂದ ಅವಲೋಕಿಸಿದ ಅವರು, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಯೋಜನೆಯು ಕನಕಪುರ ಪಟ್ಟಣದಲ್ಲಿ ಸಂಚಾರ ಸೌಲಭ್ಯವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದು, ಸ್ಥಳೀಯರಿಗೆ ಉತ್ತಮ ರಸ್ತೆ ಸೌಕರ್ಯವನ್ನು ಒದಗಿಸಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಕಾಮಗಾರಿ ಪರಿಶೀಲನೆ ವೇಳೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಮತ್ತು ಸ್ಥಳೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.