ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE) 2025 ಪೂರ್ವಭಾವಿಯಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮದ ಕರ್ಟನ್ ರೈಸರ್, ಬ್ರೋಚರ್ ಹಾಗೂ ಲಾಂಛನವನ್ನು ರಾಜ್ಯದ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಅವರು ಲೋಕಾರ್ಪಣೆ ಮಾಡಿದರು.
ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಾಜನೀಶ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಹೀಂ, ನಿರ್ದೇಶಕ ಡಾ. ರಾಜೇಂದ್ರ ಕೆ.ವಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.
KITE 2025 ಪ್ರವಾಸೋದ್ಯಮ ಮತ್ತು ಆಹ್ಲಾದಕರ ಕ್ಷೇತ್ರಗಳನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ಪ್ರಮುಖ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಮೇಳವಾಗಿದ್ದು, ವಿವಿಧ ದೇಶಗಳ ಪ್ರವಾಸೋದ್ಯಮ ವಲಯದ ತಜ್ಞರು, ಉದ್ಯಮಿಗಳು ಹಾಗೂ ಹೂಡಿಕೆದಾರರನ್ನು ಒಗ್ಗೂಡಿಸಲಿದೆ.