ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ) ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಕಾರ್ಯಕ್ರಮಕ್ಕೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ತರಬೇತಿ ಕಾರ್ಯಕ್ರಮವು ಜುಲೈ 1, 2025 ರಿಂದ ಪ್ರಾರಂಭವಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಸೇರಿದ ಪಿಯುಸಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಜೂನ್ 30, 2025ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಮಾಸಿಕ 500 ರೂ. ಶಿಷ್ಯವೇತನವನ್ನು ನೀಡಲಾಗುವುದು.
ಈ ತರಬೇತಿ ಕಾರ್ಯಕ್ರಮವು ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿದ್ದು, ಸಹಕಾರ ಸಂಸ್ಥೆಗಳ ನೇಮಕಾತಿಗಳಲ್ಲಿ ಆದ್ಯತೆಯನ್ನು ಪಡೆಯಲು ಸಹಾಯಕವಾಗಿದೆ.
ಆಸಕ್ತ ಅಭ್ಯರ್ಥಿಗಳು ಕೆಐಸಿಎಂ ಕಚೇರಿಯನ್ನು ಸಂಪರ್ಕಿಸಬಹುದು. ವಿಳಾಸ: ಕೆಐಸಿಎಂ, ನಂ. 1/3, 2ನೇ ಮಹಡಿ, 3ನೇ ಮುಖ್ಯ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳಾದ 080-355414407, 9449007661, ಅಥವಾ 8105681745ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.