ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಎಫ್‌ಐಆರ್ ಅನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ತೇಜಸ್ವಿ ಸೂರ್ಯ ಸುಳ್ಳು ಸುದ್ದಿಯನ್ನು ಹರಡಿದ್ದಾರೆ ಎಂದು ಆರೋಪಿಸಿ, ರಾಜ್ಯ ಸರ್ಕಾರವು ಒಬ್ಬ ಸಚಿವರ ಸೂಚನೆಯಂತೆ ಈ ಎಫ್‌ಐಆರ್ ದಾಖಲಿಸಿತ್ತು. ಆದರೆ, ಕರ್ನಾಟಕ ಹೈಕೋರ್ಟ್ ಈ ಎಫ್‌ಐಆರ್ ಅನ್ನು ವಿವರವಾದ ಆದೇಶದೊಂದಿಗೆ ರದ್ದುಗೊಳಿಸಿತ್ತು.
ಇದರ ವಿರುದ್ಧ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತಾದರೂ, ಇಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಿಸಿದ್ದು, ದಂಡ ವಿಧಿಸಿ, ರಾಜಕೀಯ ದುರುದ್ದೇಶಕ್ಕಾಗಿ ಸಂಸ್ಥೆಗಳನ್ನು ದುರ್ಬಳಕೆ ಮಾಡದಂತೆ ಎಚ್ಚರಿಕೆ ನೀಡಿದೆ.
ತೇಜಸ್ವಿ ಸೂರ್ಯ ಅವರು ಈ ಕುರಿತು ಹೇಳಿಕೆ ನೀಡಿ, “ಕಾಂಗ್ರೆಸ್ ದೀರ್ಘಕಾಲದಿಂದ ನನ್ನ ವಿರುದ್ಧ ಯೋಜಿತವಾಗಿ ತಪ್ಪು ಮಾಹಿತಿ ಪ್ರಚಾರ ಮಾಡುತ್ತಿದೆ. ಪೊಲೀಸ್ ಮತ್ತು ನ್ಯಾಯಾಂಗವನ್ನು ರಾಜಕೀಯ ಸೇಡು ತೀರಿಸಿಕೊಳ್ಳಲು ದುರುಪಯೋಗ ಮಾಡಿಕೊಂಡಿದೆ. ಈ ತೀರ್ಪು ಅವರಿಗೆ ಪಾಠವಾಗಲಿದೆ,” ಎಂದಿದ್ದಾರೆ.
ಈ ತೀರ್ಪು ರಾಜಕೀಯ ದುರುದ್ದೇಶಕ್ಕಾಗಿ ಕಾನೂನು ವ್ಯವಸ್ಥೆಯ ದುರ್ಬಳಕೆಯನ್ನು ತಡಯುವಲ್ಲಿ ಮಹತ್ವದ ಹೆಜ್ಜೆ ಎಂದು ಪರಿಗಣಿಸಲಾಗಿದೆ.