ಕಲಬುರಗಿ, ಮೇ 13: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ ವರ್ತುಲ ರಸ್ತೆಯಲ್ಲಿರುವ ಜಫ್ರಾಬಾದ್ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ (ರೇಷ್ಮೆ ಭವನ) ಕಟ್ಟಡವನ್ನು ಮಂಗಳವಾರ ಪರಿಶೀಲಿಸಿದರು.
ಪರಿಶೀಲನೆಯ ಸಂದರ್ಭದಲ್ಲಿ ಸಚಿವ ಖರ್ಗೆ ಅವರು ಅಧಿಕಾರಿಗಳಿಂದ ಕಟ್ಟಡ ನಿರ್ಮಾಣದ ಪ್ರಗತಿಯ ಬಗ್ಗೆ ಮಾಹಿತಿ ಕಲೆಹಾಕಿದರು. ಈ ಆಧುನಿಕ ಕಟ್ಟಡವು ರೇಷ್ಮೆ ಗೂಡುಗಳ ವ್ಯಾಪಾರಕ್ಕೆ ಸುಸಜ್ಜಿತ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿಂದ ನಿರ್ಮಾಣಗೊಳ್ಳುತ್ತಿದೆ.
ಈ ಸಂದರ್ಭದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮೀಷನರ್ ಡಾ. ಶರಣಪ್ಪ, ಎಸ್‌ಪಿ ಅಡ್ಡೂರು ಶ್ರೀನಿವಾಸನ್ ಹಾಗೂ ರೇಷ್ಮೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.