ಬೆಂಗಳೂರು, ಕಾಂಗ್ರೇಸ್ ಪಕ್ಷದ ತಿರಂಗಾ ಯಾತ್ರೆಯಿಂದಾಗಿ ಬೆಂಗಳೂರಿನ ಹಲವು ಪ್ರಮುಖ ರಸ್ತೆಗಳಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆ ಆರ್ ಸರ್ಕಲ್, ವಿದಾನಸೌಧ, ಮೆಜೆಸ್ಟಿಕ್, ಆನಂದರಾವ್ ಸರ್ಕಲ್, ಕಾರ್ಪೋರೇಷನ್ ಸೇರಿದಂತೆ ನಗರದ ಪ್ರಮುಖ ಕೇಂದ್ರಗಳಲ್ಲಿ ಟ್ರಾಫಿಕ್ ಸಂಚಾರ ಸ್ಥಗಿತಗೊಂಡಿತು. ಬೆಳಗ್ಗೆಯಿಂದಲೇ ಆರಂಭವಾದ ಈ ಜಾಮ್‌ನಿಂದಾಗಿ ಜನರು ಗಂಟೆಗಳ ಕಾಲ ರಸ್ತೆಯಲ್ಲಿ ಸಿಲುಕಿಕೊಂಡರು. ಅನೇಕರು ತಮ್ಮ ಕೆಲಸದ ಸ್ಥಳಗಳಿಗೆ ತಲುಪಲು ವಿಳಂಬವಾಯಿತು, ಮತ್ತು ಶಾಲಾ ಮಕ್ಕಳು ಸಹ ತೊಂದರೆ ಅನುಭವಿಸಿದರು.
ಸಾರ್ವಜನಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಅಧಿಕಾರಿಗಳನ್ನು ಟೀಕಿಸಿದರು. ಟ್ರಾಫಿಕ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟರು. ಟ್ರಾಫಿಕ್ ಪೊಲೀಸರು ಜಾಮ್ ಅನ್ನು ನಿಯಂತ್ರಿಸಲು ಯತ್ನಿಸಿದರೂ, ಯಾತ್ರೆಯ ದೊಡ್ಡ ಪ್ರಮಾಣದಿಂದಾಗಿ ಅದು ಕಷ್ಟಕರವಾಯಿತು.