ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ/ ಸ್ನಾತಕೋತ್ತರ ಪದವಿ ಕೋರ್ಸ್‍ಗಳಾದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಎಂ.ಲಿಬ್. ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಡಿಪೆÇ್ಲಮಾ ಹಾಗೂ ಯುಜಿ/ ಪಿಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ 2025 ಜನವರಿ 10 ರಿಂದ ಬೆಂಗಳೂರಿನ ಬಾಪೂಜಿನಗರ ಪ್ರಾದೇಶಿಕ ಕೇಂದ್ರ-01 ರಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ.
ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ನಲ್ಲಿ ಮಾಹಿತಿಯನ್ನು ಒದಗಿಸಲಾಗಿದ್ದು, ಕೋರ್ಸ್‍ಗಳ ಪ್ರವೇಶಾತಿಗೆ ಮಾರ್ಚ್ 31 ಕೊನೆಯ ದಿನಾಂಕವಾಗಿದೆ.
ಈಗಾಗಲೇ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹಾಗೂ ಇನ್ನೂ ಅರ್ಜಿ ಸಲ್ಲಿಸದೇ ಇರುವಂತಹ ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಕಛೇರಿಗೆ ಭೇಟಿ ನೀಡಿ ಮಾರ್ಚ್ 31ರ ಒಳಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 9880526439/ 9019526439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.