ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಡಿಟರ್ಜೆಂಟ್‌ಗಳ ನಿಯಮಿತ ಸಂಸ್ಥೆ (ಕೆಎಸ್‌ಡಿಎಲ್) 2024-25ರ ಹಣಕಾಸು ಸಾಲಿನ ಲಾಭದಿಂದ ₹135 ಕೋಟಿ ರೂಪಾಯಿಗಳ ಡಿವಿಡೆಂಡ್ ಚೆಕ್ ಅನ್ನು ಶುಕ್ರವಾರ ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್ ಮತ್ತು ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ನೀಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ. ಎಂ.ಸಿ. ಸುಧಾಕರ್, ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ. ಪ್ರಶಾಂತ್ ಅವರು ಉಪಸ್ಥಿತರಿದ್ದರು.
ಕೆಎಸ್‌ಡಿಎಲ್ ಸಂಸ್ಥೆಯ ಈ ಹಸ್ತಾಂತರವು ರಾಜ್ಯದ ಸಾರ್ವಜನಿಕ ವಲಯ ಉದ್ಯಮಗಳ ಉತ್ತಮ ಕಾರ್ಯಕ್ಷಮತೆಯ ಸಂಕೇತವಾಗಿದ್ದು, ಸರ್ಕಾರದ ಹಣಕಾಸು ಸ್ಥಿರತೆಗೆ ಮುಖ್ಯ ಇಂಧನವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.












