ಬೆಂಗಳೂರು: ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಡಿಜಿಟಲ್ ಸ್ಪರ್ಶ ಹೊಂದಿರುವ ಸಾರ್ವಜನಿಕ ಗ್ರಂಥಾಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಈ ಭೇಟಿಯನ್ನು ಪಿಐಬಿ ಬೆಂಗಳೂರು ವರದಿ ಮಾಡಿದೆ.
ಜಿಲ್ಲಾ ಪಂಚಾಯಿತಿಯ ಅನುದಾನದಿಂದ 24 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿತವಾದ ಈ ಸುಸಜ್ಜಿತ ಗ್ರಂಥಾಲಯವು ಅತ್ಯಂತ ವ್ಯವಸ್ಥಿತವಾಗಿ ನಿರ್ವಹಣೆಯಲ್ಲಿದ್ದು, ಓದುಗರಿಗೆ ಉತ್ತಮ ವಾತಾವರಣವನ್ನು ಒದಗಿಸುತ್ತದೆ. ಇಲ್ಲಿ 5,800ಕ್ಕೂ ಹೆಚ್ಚು ವಿವಿಧ ವಿಷಯಗಳಿಗೆ ಸಂಬಂಧಿಸಿದ ಪುಸ್ತಕಗಳ ಸಂಗ್ರಹ, ಕಂಪ್ಯೂಟರ್ ವ್ಯವಸ್ಥೆ ಮತ್ತು ಡಿಜಿಟಲ್ ಸೌಲಭ್ಯಗಳು ಲಭ್ಯವಿದ್ದು, ಓದುಗರ ಆಕರ್ಷಣೆಯ ಕೇಂದ್ರವಾಗಿದೆ.

ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಸಚಿವೆಯ ಆಪ್ತ ಕಾರ್ಯದರ್ಶಿ ಅನಿರುದ್ಧ್ ಶ್ರವಣ್, ಸಹಾಯಕ ಆಯುಕ್ತ ಪಿ. ಪ್ರಮೋದ್, ಸಿರುಗುಪ್ಪ ತಹಶೀಲ್ದಾರ್ ಗೌಸಿಯಾ ಬೇಗಂ, ತಾಪಂ ಇಓ ಪವನ್ ಕುಮಾರ್ ಸೇರಿದಂತೆ ಗ್ರಂಥಾಲಯ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.