ಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಜೋಡುಪಾಲ ಬಳಿ ಬೆಟ್ಟದ ಮಣ್ಣು ಕುಸಿದ ಘಟನೆ ವರದಿಯಾಗಿದೆ. ಸಣ್ಣ ಪ್ರಮಾಣದ ಮಣ್ಣು ಹೆದ್ದಾರಿಗೆ ಕುಸಿದಿದ್ದರಿಂದ ವಾಹನ ಸಂಚಾರಕ್ಕೆ ತಕ್ಷಣದ ತೊಂದರೆಯಾಗಿಲ್ಲವಾದರೂ, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಪ್ರಸ್ತುತ, ಮಳೆಯ ಪ್ರಮಾಣ ಹೆಚ್ಚಾದರೆ ಗುಡ್ಡದ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಸಂಬಂಧಪಟ್ಟ ಇಲಾಖೆಗಳು ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ವಾಹನ ಚಾಲಕರಿಗೆ ಈ ಮಾರ್ಗದಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.