ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೇಂದ್ರ ಕಛೇರಿಯಲ್ಲಿ ಇಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಡಿ.ಕೆ. ಶಿವಕುಮಾರ್ ಅವರು ನಾಮಫಲಕವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಅವರು ಪ್ರತಿಮೆಗಳಿಗೆ ಪುಷ್ಪಾರ್ಪಣೆ ಮಾಡಿ, ಕಛೇರಿಯಲ್ಲಿ ಪೂಜೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರೀಸ್, ಶಾಸಕರಾದ ರವಿ ಸುಬ್ರಮಣ್ಯ, ಉದಯ್ ಗರುಡಾಚಾರ್, ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಕೆ.ಎನ್. ರಮೇಶ್, ಪೊಮ್ಮಲ ಸುನೀಲ್ ಕುಮಾರ್, ರಾಜೇಂದ್ರ ಕೆ.ವಿ., ಮತ್ತು ಅಪರ ಆಯುಕ್ತ (ಅಭಿವೃದ್ಧಿ) ಲತಾ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ಕೇಂದ್ರ ಕಛೇರಿಯ ಉದ್ಘಾಟನೆಯು ನಗರದ ಅಭಿವೃದ್ಧಿಗೆ ಮತ್ತಷ್ಟು ಚೇತನ ನೀಡಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.