ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಲು ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ವತಿಯಿಂದ ಎರಡು ದಿನಗಳ ಪ್ರವಾಸಿ ಪ್ಯಾಕೇಜ್ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಈ ಪ್ಯಾಕೇಜ್‌ನಲ್ಲಿ ಒಂದು ದಿನ ಚಿತ್ರದುರ್ಗದ ಐತಿಹಾಸಿಕ ತಾಣಗಳಿಗೆ ಮತ್ತು ಒಂದು ದಿನ ಹಂಪಿಯ ಪ್ರವಾಸಕ್ಕೆ ಸೌಲಭ್ಯ ಕಲ್ಪಿಸಲಾಗುವುದು.
ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆಯ ಸಂದರ್ಭದಲ್ಲಿ ಸದಸ್ಯ ಕೆ.ಸಿ.ವೀರೇಂದ್ರ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಸಚಿವರು ಈ ಉತ್ತರ ನೀಡಿದರು.