ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯ 60 ವರ್ಷದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಚಿತ್ರ ಕಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮುಕ್ತ ಅವಕಾಶವನ್ನು ಕಲ್ಪಿಸಿದೆ. ಕರ್ನಾಟಕದ ಕಲಾ ಶಾಲೆಗಳಲ್ಲಿ ಯಾವುದೇ ಹಂತದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಪೂರ್ವ ಸಿದ್ಧತೆಗಾಗಿ ತಮಗೆ ದಿನಾಂಕ:30.04.2025 ವರೆಗೆ ಕಾಲಾವಕಾಶವನ್ನು ನೀಡಲಾಗುವುದು. ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ತಾವು ರಚಿಸಿರುವ ಕಲಾಕೃತಿಗಳ 2 ಛಾಯಾಚಿತ್ರಗಳನ್ನು ಹಾಗೂ ತಾವು ಅಭ್ಯಾಸ ಮಾಡುತ್ತಿರುವ ಚಿತ್ರ ಕಲಾ ಶಾಲೆಯ ಪ್ರಾಂಶುಪಾಲರಿಂದ ದೃಢೀಕರಣ ಪತ್ರದೊಂದಿಗೆ ಅರ್ಜಿ ಕಳುಹಿಸಿ ಕೊಡುವುದು.
ಅರ್ಜಿಗಳನ್ನು ಗೂಗಲ್ ಫಾರ್ಮ್ ನಲ್ಲಿ ಭರ್ತಿಮಾಡಿ ಅಕಾಡೆಮಿ ಕೋರಿರುವ ಅಗತ್ಯ ದಾಖಲೆಗಳನ್ನು ಅನ್ಲೈನ್ ಮುಖಾಂತರ ಗೂಗಲ್ನಲ್ಲಿ ಲಗತ್ತಿಸುವುದು. (ನಬ್ಸೈಟ್: www.lalitkala.karnataka.gov.in) ಹೆಚ್ಚಿನ ವಿವರಗಳಿಗಾಗಿ ದೂ: 08022480297 ಸಂಪರ್ಕಿಸಬಹುದು.
ಆಯ್ಕೆಯ ಪ್ರಕ್ರಿಯೆ ಹೀಗಿರುತ್ತದೆ.
ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಂದರ ಪ್ರಕೃತಿಯ ಮಡಿಲಲ್ಲಿ ಚಿತ್ರ ಕಲಾ ಶಿಬಿರವನ್ನು ಏರ್ಪಡಿಸಲಾಗುವುದು. ಶಿಬಿರದಲ್ಲಿ ಅತ್ಯುತ್ತಮ ಚಿತ್ರ ರಚಿಸಿದ ವಿದ್ಯಾರ್ಥಿಗಳಿಗೆ (ಕನಿಷ್ಠ 6. ಗರಿಷ್ಠ 10 ವಿದ್ಯಾರ್ಥಿಗಳಿಗೆ) ರೂ. 15,000/- ಗಳ ನಗದಿನೊಂದಿಗೆ ಸ್ಮರಣಿಕೆ, ಪ್ರಮಾಣ ಪತ್ರವನ್ನು ಬಹುಮಾನವಾಗಿ ನೀಡಲಾಗುವುದು. ಜೊತೆಗೆ 2025ರ ಉತ್ತಮ ಕಲಾ ವಿದ್ಯಾರ್ಥಿಯೆಂಬ ಗೌರವವನ್ನು ನೀಡಲಾಗುವುದು.
ತಮ್ಮ ಕ್ರಿಯಾಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಈ ಸ್ಪರ್ಧೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಿದೆ.