ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ಆದೇಶವನ್ನು ಕೇಂದ್ರೀಯ ಆಡಳಿತ ನ್ಯಾಯಮಂಡಳಿ (ಸಿಎಟಿ) ರದ್ದುಗೊಳಿಸಿದೆ. ಈ ಮೂಲಕ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಸಿಎಟಿಯಿಂದ ಬಂದಿರುವ ಮಹತ್ವದ ಆದೇಶದಲ್ಲಿ ವಿಕಾಸ್ ಕುಮಾರ್ ಅವರನ್ನು ಸೇವೆಯಲ್ಲಿ ಮುಂದುವರೆಸಲು ನಿರ್ದೇಶನ ನೀಡಲಾಗಿದೆ. ಜೊತೆಗೆ, ಅವರು ಅಮಾನತುಗೊಂಡಿದ್ದ ತಿಂಗಳನ್ನು ಕರ್ತವ್ಯದ ತಿಂಗಳು ಎಂದು ಪರಿಗಣಿಸಲಾಗುವುದು ಎಂದು ಆದೇಶಿಸಲಾಗಿದೆ. ಇದರ ಜೊತೆಗೆ, ಈ ಪ್ರಕರಣದಲ್ಲಿ ಅಮಾನತುಗೊಂಡ ಇತರ ಅಧಿಕಾರಿಗಳಿಗೂ ಇದೇ ರೀತಿಯ ಪ್ರಯೋಜನವನ್ನು ವಿಸ್ತರಿಸುವ ಬಗ್ಗೆ ಪರಿಶೀಲಿಸಲು ಸರ್ಕಾರಕ್ಕೆ ಸಿಎಟಿ ಸೂಚಿಸಿದೆ.
ವಿಕಾಸ್ ಕುಮಾರ್ ವಿಕಾಸ್ ಅವರು ಸರ್ಕಾರದ ಅಮಾನತು ಆದೇಶದ ವಿರುದ್ಧ ಸಿಎಟಿಯ ಮೆಟ್ಟಿಲೇರಿದ್ದರು. ಸಿಎಟಿಯ ಈ ಆದೇಶವು ಸರ್ಕಾರದ ನಿರ್ಧಾರಕ್ಕೆ ಗಂಭೀರ ಪೆಟ್ಟು ನೀಡಿದಂತಾಗಿದೆ.
ಈ ತೀರ್ಪು, ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ತೊಡಗಿಕೊಂಡಿದ್ದ ಅಧಿಕಾರಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.