ಮಹತ್ವದ ಸಂದರ್ಶನಗಳಿಗೆ ವೇದಿಕೆ ಕಲ್ಪಿಸುವ ನಗರ ಭೇಟಿಗೆ ಸಚಿವ ದಿನೇಶ್ ಗುಂಡೂರಾವ್ ಆತ್ಮೀಯ ಸ್ವಾಗತ
ಬೆಂಗಳೂರು: ಚಿಲಿ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷ ಶ್ರೀ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬಂಗ್ಳೂರಿನ ಪ್ರವಾಸಕ್ಕಾಗಿ ಇಂದು ಮಧ್ಯಾಹ್ನ 12:30 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಅವರನ್ನು ಸ್ವಾಗತಿಸಲು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಸತ್ಯವತಿ ಜಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀ ಬಿ. ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀ ಜಗದೀಶ್ ಜಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀ ಎ.ಬಿ. ಬಸವರಾಜು ಹಾಗೂ ಚಿಲಿ ಗಣರಾಜ್ಯದ ಅಧಿಕೃತ ನಿಯೋಗದ ಸದಸ್ಯರು ಮತ್ತು ಇತರೆ ಗಣ್ಯರು ಉಪಸ್ಥಿತರಿದ್ದರು.
ಚಿಲಿ ಅಧ್ಯಕ್ಷರ ಈ ಭೇಟಿ ವೈಜ್ಞಾನಿಕ, ತಂತ್ರಜ್ಞಾನ, ಶಿಕ್ಷಣ ಹಾಗೂ ಆರ್ಥಿಕ ಸಹಯೋಗದತ್ತ ಭಾರತ-ಚಿಲಿ ಸಂಬಂಧವನ್ನು ಇನ್ನಷ್ಟು ಬಲಪಡಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.