ಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ವಿರೋಧಿಸಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಶನಿವಾರ ಚೆನ್ನೈನಲ್ಲಿ ಸಭೆ ನಡೆಸಿದರು. ಕರ್ನಾಟಕವನ್ನು ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿನಿಧಿಸಿದರು.
ಈ ಸಭೆಯ ನೇತೃತ್ವ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಹಿಸಿದ್ದರು. ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್, ಒಡಿಶಾದ ಮಾಜಿ ಸಚಿವ ಸಂಜಯ್ ಕುಮಾರ್ ದಾಸ್ ಸೇರಿದಂತೆ ಹಲವು ನಾಯಕರು ಈ ಸಭೆಗೆ ಹಾಜರಿದ್ದರು.
ಸಭೆಯಲ್ಲಿ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಮಾಡಿದರೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯಿತು. ಇದನ್ನು ತೀವ್ರವಾಗಿ ವಿರೋಧಿಸುವ ನಿರ್ಧಾರ ಸಭೆಯಲ್ಲಿ ಕೈಗೊಳ್ಳಲಾಯಿತು.