ಬೆಳಗಾವಿಯಲ್ಲಿ ಜನವರಿ 21ರಂದು ನಡೆಯಲಿರುವ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್” ಬೃಹತ್ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನಡೆಸಿದರು.
ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ, ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ಎಚ್.ಸಿ. ಮಹದೇವಪ್ಪ, ಚಲುವರಾಯಸ್ವಾಮಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸಂತೋಷ್ ಲಾಡ್, ಆರ್.ಬಿ. ತಿಮ್ಮಾಪುರ, ವೆಂಕಟೇಶ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್, ವಸಂತಕುಮಾರ್ ಮತ್ತಿತರರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದಿವಂಗತ ಡಾ. ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್” ಎಂಬ ಧ್ಯೇಯದಡಿ ನಡೆಯುವ ಈ ಸಮಾವೇಶಕ್ಕೆ ಸಂಬಂಧಿಸಿದ ಪ್ರಮುಖ ಕಾರ್ಯಯೋಜನೆಗಳು ಹಾಗೂ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
Discover more from amiroNEWS
Subscribe to get the latest posts sent to your email.