ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಉಪಸ್ಥಿತರಿದ್ದರು.
ಡಾ. ಬಾಬು ಜಗಜೀವನ್ ರಾಮ್ ಅವರು ದೇಶದ ಕೃಷಿ ಕ್ಷೇತ್ರದಲ್ಲಿ ಹಸಿರು ಕ್ರಾಂತಿಯನ್ನು ತಂದುಕೊಟ್ಟ ಹಿರಿಯ ನಾಯಕರಾಗಿ ಹಾಗೂ ಸಮಾಜ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ವ್ಯಕ್ತಿಯಾಗಿ ಗುರುತಿಸಲ್ಪಟ್ಟಿದ್ದಾರೆ. ವಿಧಾನಸೌಧದ ಆವರಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಗಣ್ಯರು ಮತ್ತು ಅಧಿಕಾರಿಗಳು ಭಾಗವಹಿಸಿ ಅವರ ಸೇವೆಗಳನ್ನು ಸ್ಮರಿಸಿದರು.












