ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಸೇವನೆಯ ಅಪಾಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಮೂಡಿಸಲು ಆಟೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್ ವಿಕಾಸ್ ಕಿಶೋರ್ ರವರು ಮಾಹಿತಿ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಿರುವ ಬ್ಲೂಮ್‌ಬರ್ಗ್ ಫಿಲಾಂತ್ರಪೀಸ್ ಬೆಂಬಲಿತ ಆರೋಗ್ಯಕರ ನಗರಗಳ ಪಾಲುದಾರಿಕೆಯ ಸಹಭಾಗಿತ್ವದಲ್ಲಿ ತಂಬಾಕಿನ ಹಾನಿಕಾರಕ ಪರಿಣಾಮಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಬಗ್ಗೆ ಜಾಗೃತಿ ಮೂಡಿಸಲು ನಗರದಾದ್ಯಂತ ಆಟೋ ಅಭಿಯಾನವನ್ನು ಆರಂಭಿಸಿದೆ.
ಈ ಉಪಕ್ರಮದ ಅಂಗವಾಗಿ 16 ಬ್ರಾಂಡ್‌ಗಲ್ಲಿರುವ ಆಟೋರಿಕ್ಷಾಗಳು ನಗರದ ಜನತಾನಿಯ ಪ್ರದೇಶಗಳಲ್ಲಿ ಸಂಚರಿಸಲಿದ್ದು, ತಂಬಾಕು ಬಳಕೆಯಿಂದ ಉಂಟಾಗುವ ಹಾನಿಗಳು ಮತ್ತು ಧೂಮಪಾನ ಮುಕ್ತ ಸಾರ್ವಜನಿಕ ಸ್ಥಳಗಳ ಮಹತ್ವದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ರೆಕಾರ್ಡ್ ಮಾಡಿದ ಸಂದೇಶಗಳನ್ನು ಪ್ರಸಾರ ಮಾಡಲಿವೆ. ಈ ಅಭಿಯಾನವು ಒಂದು ವಾರದವರೆಗೆ ನಡೆಯಲಿದೆ ಮತ್ತು ತಂಬಾಕು ನಿಯಂತ್ರಣ ಕಾನೂನುಗಳ ಪಾಲನೆಯನ್ನು ಬಲಪಡಿಸಲು ಹಾಗೂ ಆರೋಗ್ಯಕರ ಬೆಂಗಳೂರನ್ನು ಉತ್ತೇಜಿಸಲು ಉದ್ದೇಶಿಸಲಾಗಿದೆ.
ಆರೋಗ್ಯಕರ ನಗರಗಳ ಪಾಲುದಾರಿಕೆಯ ಉಪಕ್ರಮ ಯೋಜನಾ ನಿರ್ದೇಶಕಿ ಡಾ. ತ್ರಿವೇಣಿ ಬಿ.ಎಸ್. ಅವರ ಮಾತುಗಳ ಪ್ರಕಾರ, ಬಿಬಿಎಂಪಿಯೊಂದಿಗೆ ಪಾಲುದಾರಿಕೆಯಿಂದ, ಯುವಜನರನ್ನು ತಂಬಾಕು ಬಳಕೆಯಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳಿಂದ ರಕ್ಷಿಸುವ ಮತ್ತು ಸಾರ್ವಜನಿಕ ಸ್ಥಳಗಳು ಧೂಮಪಾನದ ಹೊಗೆ ಮುಕ್ತವಾಗಿರುವುದನ್ನು ಖಾತ್ರಿಪಡಿಸುವ ಬದ್ಧತೆಯನ್ನು ಬಲಪಡಿಸುತ್ತಿದ್ದಾರೆ.
ಮುಖ್ಯ ಆರೋಗ್ಯಾಧಿಕಾರಿ ಡಾ. ಸೈಯದ್ ಸಿರಾಜುದ್ದೀನ್ ಮದಿನಿ, ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಡಾ. ಕುಮಾರ್ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.