ತಿರುಮಲ:ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಮುಂಜಾನೆ ಕುಟುಂಬ ಸಮೇತ ತಿರುಮಲಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿ ಅವರ ದರ್ಶನ ಪಡೆದರು.
ಈ ಭೇಟಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಪುನಶ್ಚೇತನಕ್ಕಾಗಿ ₹11,400 ಕೋಟಿಯ ಮಹತ್ವದ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ನಡೆದಿದೆ. ಈ ನಿರ್ಧಾರವನ್ನು ಅವರು ಐತಿಹಾಸಿಕವೆಂದು ವರ್ಣಿಸಿದ್ದು, 2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ಸಾಧಿಸಲು ಸಹಾಯ ಮಾಡಲಿದೆ ಎಂದು ಹೇಳಿದರು.
ಬಳಿಕ, ಸಹೋದ್ಯೋಗಿ ಹಾಗೂ ಉಕ್ಕು ಖಾತೆಯ ಸಹಾಯಕ ಸಚಿವರಾದ ಬಿಜೆಪಿ ವರ್ಮಾ ಅವರೊಂದಿಗೆ ವಿಶಾಖಪಟ್ಟಣಕ್ಕೆ ತೆರಳುವ ಮೊದಲು ಶ್ರೀ ಬಾಲಾಜಿಯ ದರ್ಶನ ಪಡೆದು ಪುನೀತರಾದರು.
ಈ ಮಹತ್ವದ ಪ್ಯಾಕೇಜ್ ಘೋಷಣೆಯೊಂದಿಗೆ, ದೇಶದ ಉಕ್ಕು ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಹಾಗೂ ಸಾರ್ವಜನಿಕ ವಲಯದ ಉದ್ಯಮಗಳ ಪುನಶ್ಚೇತನವನ್ನು ಖಚಿತಗೊಳಿಸಲು ಸರ್ಕಾರ ಬದ್ಧವಾಗಿದೆ.