ಬೆಂಗಳೂರು:
ತೆಂಗು ಬೆಳೆಗಾರರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತೆಂಗಿನ ರೋಗಬಾಧೆಯನ್ನು ನಿಯಂತ್ರಿಸಲು ಸೂಕ್ತ ಕಾರ್ಯಕ್ರಮ ರೂಪಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆಯ ಸಂದರ್ಭದಲ್ಲಿ ಸದಸ್ಯ ಸಿ.ಎನ್.ಬಾಲಕೃಷ್ಣ ಅವರು ತೆಂಗಿನ ರೋಗಬಾಧೆ ವಿಷಯವನ್ನು ಪ್ರಸ್ತಾಪಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ತೆಂಗು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.