ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದ ತನಿಖೆಯ ನೆಪದಲ್ಲಿ, ಕಡಬ, ಉಜಿರೆ ಮತ್ತು ಸುಳ್ಯ ಠಾಣಾ ವ್ಯಾಪ್ತಿಯ ಅಮಾಯಕ ಹಿಂದೂಗಳಿಗೆ ಪೊಲೀಸರು ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ದೂರು ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಿದೆ. ರಾಜ್ಯ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಕೆ.ಎನ್. ಸುಧೀಂದ್ರರಾವ್ ಅವರು ಈ ಪ್ರಕರಣದ ವಿಚಾರಣೆ ನಡೆಸಿ, ಮುಂದಿನ ಕ್ರಮಕ್ಕಾಗಿ ಜುಲೈ 15ರಂದು ಒಂದು ತಿಂಗಳ ಕಾಲಾವಕಾಶ ನೀಡಿದ್ದಾರೆ.
ಮೇ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ರಾತ್ರಿ ವೇಳೆಯಲ್ಲಿ ಹಿಂದೂಗಳ ಮನೆಗಳಿಗೆ ಭೇಟಿ ನೀಡಿ, ತನಿಖೆಯ ನೆಪದಲ್ಲಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆಯ ವಿರುದ್ಧ ಸಮಸ್ತ ಹಿಂದೂ ಸಂಘಟನೆಗಳು ಒಗ್ಗೂಡಿ ಕಾನೂನು ಹೋರಾಟ ಆರಂಭಿಸಿದ್ದವು. ಜೂನ್ 4, 2025ರಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನೇತೃತ್ವದಲ್ಲಿ ರಾಜ್ಯ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರರಾವ್ ಅವರಿಗೆ ದೂರು ಸಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಶ್ರೀ. ಮೋಹನ ಗೌಡ, ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಅಮೃತೇಶ್ ಎನ್.ಪಿ., ರಾಷ್ಟ್ರ ರಕ್ಷಣಾ ಪಡೆಯ ಶ್ರೀ. ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವು ವಕೀಲರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ವಿಜಯಪುರ, ಹುಬ್ಬಳ್ಳಿ, ಕಾರವಾರ, ಶಿವಮೊಗ್ಗ, ಹಾಸನ, ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಪೊಲೀಸರ ಈ ತಾರತಮ್ಯದ ಕೃತ್ಯವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದ್ದವು.
ಸಂಪರ್ಕಕ್ಕಾಗಿ:
ಶ್ರೀ. ಮೋಹನ ಗೌಡ
ಹಿಂದೂ ರಾಷ್ಟ್ರ ಸಮನ್ವಯ ಸಮಿತಿ
(ಸಂಪರ್ಕ ಸಂಖ್ಯೆ: 7204082609)