ದೊಡ್ಡಬಳ್ಳಾಪುರ: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಅವರು ಇಂದು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ಈ ಯೋಜನೆಯಡಿ ರಾಜ್ಯದ 43 ಲಕ್ಷಕ್ಕೂ ಅಧಿಕ ರೈತರಿಗೆ ಹಣ ಬಿಡುಗಡೆಯಾಗಿದ್ದು, ಕೃಷಿಕರು ಇದರ ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ರಾಜ್ಯದ ನೀರಾವರಿ ಯೋಜನೆಗಳಾದ ಭದ್ರಾ ಮೇಲ್ದಂಡೆ, ಎತ್ತಿನಹೊಳೆ, ಮತ್ತು ನೇತ್ರಾವತಿ ತಿರುವು ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.