Monday, October 20, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ – ಸಚಿವ ದಿನೇಶ್ ಗುಂಡೂರಾವ್

SP by SP
7 months ago
Reading Time: 2 mins read
A A
18
SHARES
50
VIEWS

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತಚತರಿಸಿದ ಸಚಿವರು, ಕಳೆದ 3 ವರ್ಷಗಳಲ್ಲಿ ನಕಲಿ ಔಷಧ ಮಾರಾಟಗಾರರನ್ನು ಪತ್ತೆ ಹಚ್ಚಿ ಕಲಂ 17 ಬಿ, (b), (c) (d) ಮತ್ತು (e) ರ ಔಷಧ ಮತ್ತು ಕಾಂತಿ ವರ್ಧಕ ಅಧಿನಿಯಮ 1940 ಮತ್ತು ನಿಯಮಗಳಡಿಯಲ್ಲಿ ಸೂಕ್ತ ಕ್ರಮಕೈಗೊಂಡು ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
ಕಳೆದ 3 ವರ್ಷಗಳಲ್ಲಿ ಒಟ್ಟು 20 ನಕಲಿ ಔಷಧ ತಯಾರಿಕಾ ಕಂಪನಿ ಮತ್ತು 01 ಔಷಧ ಮಾರಾಟಗಾರರ ಪ್ರಕರಣಗಳನ್ನು ಪತ್ತೆ ಮಾಡಿ ಮೊಕ್ಕದ್ದಮೆ ಹೂಡಲಾಗಿದೆ. 2022-23 ನೇ ಸಾಲಿನಲ್ಲಿ ಒಟ್ಟು 06, 2023-24ನೇ ಸಾಲಿನಲ್ಲಿ ಒಟ್ಟು 10 ನಕಲಿ ಔಷಧ ತಯಾರಕರು ಮತ್ತು 2024-25 ನೇ ಸಾಲಿನಲ್ಲಿ 04 ನಕಲಿ ಔಷಧ ತಯಾರಕರ ಮತ್ತು 01 ನಕಲಿ ಔಷಧ ಮಾರಾಟಗಾರರ ವಿರುದ್ಧ ವಿವಿಧ ಮಾನ್ಯ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಕಾನೂನು ರೀತ್ಯಾ ಅಗತ್ಯ ಕ್ರಮಗಳನ್ನು ಸಹ ಜರುಗಿಸಲಾಗಿದೆ. ಈ ಬಗ್ಗೆ ಕೂಡಲೇ Drug Recall policy ಜಾರಿ ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಪ್ರಾರಂಭಿಸಲಾಗುವುದು – ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು, ಮಾರ್ಚ್ 17, (ಕರ್ನಾಟಕ ವಾರ್ತೆ):

ಕಲಬುರಗಿ ಜಿಲ್ಲೆಯ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ನಿಮ್ಹಾನ್ಸ್ ಮಾದÀರಿಯ ಸಂಸ್ಥೆಯನ್ನು ಪ್ರಾರಂಭಿಸಲು ಸರ್ಕಾರ ಉದ್ದೇಶಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಸಹ ಘೋಷಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ ವೆಚ್ಚದಲ್ಲಿ ಅಗತ್ಯ ಮಾನವ ಸಂಪನ್ಮೂಲ ಹಾಗೂ ಸುಸಜ್ಜಿತ ಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಸೌರ ಶಕ್ತಿ ಮತ್ತು ಪವನ ಶಕ್ತಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ – ಸಚಿವ ಕೆ.ಜೆ ಜಾರ್ಜ್

ಬೆಂಗಳೂರು, ಮಾರ್ಚ್ 17, (ಕರ್ನಾಟಕ ವಾರ್ತೆ):

ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸೌರ ಶಕ್ತಿ ಮತ್ತು ಪವನ ಶಕ್ತಿ ಉತ್ಪಾದನಾ ಘಟಕಗಳನ್ನು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಬಸವನಗೌಡ ಬಾದರ್ಲಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪವನ ಸೋಲಾರ್ ಒಳಗೊಂಡಂತೆ ಇನ್ನಿತರ ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದಿಸುವುದನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು “ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ 2022-27” ನ್ನು ಜಾರಿಗೆ ತಂದಿರುತ್ತದೆ. ಈ ನೀತಿಯಲ್ಲಿ ಸ್ಪರ್ಧಾತ್ಮಕ ಬಿಡ್ ಮುಖೇನ ಸ್ವಯಂ ಬಳಕೆ, ಸಮೂಹ ಸ್ವಯಂ ಬಳಕೆ, ಮೂರನೇ ವ್ಯಕ್ತಿ ಮಾರಾಟ ಮತ್ತು ಖಾಸಗಿ ಪಾರ್ಕ್ ವರ್ಗಗಳಡಿ ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಹಂಚಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪವನ ಮತ್ತು ಸೌರ ವಿದ್ಯುತ್ ಯೋಜನೆಗಳನ್ನು ಸ್ಥಾಪಿಸಲು ಅನುಕೂಲವಾಗುವಂತೆ ಜಿಲ್ಲಾ / ತಾಲ್ಲೂಕುವಾರು ಸಂಭವನೀಯ ಸಾಮರ್ಥ್ಯವನ್ನು ಪವನ ವಿದ್ಯುತ್ ಮತ್ತು ಸೌರ ವಿದ್ಯುತ್ ಸಂಸ್ಥೆಗಳಿಂದ ಪಡೆಯಲು ಕ್ರೆಡಲ್ ವೆಬ್ ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಅದರಂತೆ ರಾಯಚೂರಿನಲ್ಲಿ 6055 ಸಾಮಮರ್ಥ್ಯದ ಪವನ ವಿದ್ಯುತ್ 50275 ಸಾಮರ್ಥ್ಯದ ಸೌರ ವಿದ್ಯುತ್ ಮತ್ತು ಕಲಬುರಗಿಯಲ್ಲಿ 2154.89 ಪವನ ವಿದ್ಯುತ್ ಹಾಗೂ 41883 ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಸ್ಥಾಪಿಸಲು ಕ್ರಮ ಕೈಗೊಂಡಿದೆ. ಕ್ರೆಡಲ್ ವತಿಯಿಂದ ಕಲಬುರಗಿ ತಾಲ್ಲೂಕಿನ ನದಿಸಿನ್ನೂರ ಫಿರೋಜಾಬಾದ್ ಹಾಗೂ ಕಿರಣಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್‍ನ ಒಡೆತನದಲ್ಲಿರುವ 551 ಎಕರೆ ಜಮೀನಿನಲ್ಲಿ ಟ್ಯಾರಿಪ್ ಬೇಸ್ಡ್ ಕಾಂಪಿಟೇಟಿವ್ ಬಿಡ್ಡಿಂಗ್ ವರ್ಗದಡಿ 100 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಘಟಕದ ಜೊತೆಗೆ ಗಂಟೆಗೆ 100 ಮೆಗಾ ವ್ಯಾಟ್ ವ್ಯವಸ್ಥೆಯನ್ನು ಹೊಂದಿದ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಕೆ.ಈ.ಆರ್.ಸಿ ಅವರಿಂದ ಟ್ಯಾರೀಪ್ ಅಡಾಪ್ಟ್ ಆದ ತಕ್ಷಣ ಯಶಸ್ವಿ ಬಿಡ್ಡುದಾರರಿಗೆ ಲೆಟರ್ ಆಫ್ ಅವಾರ್ಡ್ ನೀಡಲಾಗುವುದು ಎಂದು ತಿಳಿಸಿದರು.

ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಕುರಿತು ಪರಿಶೀಲನೆ ಮಾಡಿ ಚರ್ಚಿಸಿ ತೀರ್ಮಾನಿಸಲಾಗುವುದು – ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಮಾರ್ಚ್ 17, (ಕರ್ನಾಟಕ ವಾರ್ತೆ):
ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇವiಕಾತಿ ನಿಯಮಗಳು ಬೇರೆ ಬೇರೆ ಆಗಿರುತ್ತದೆ. ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತುತ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಗ್ರೂಪ್ ಬಿ ಮತ್ತು ಮುಖ್ಯ ಶಿಕ್ಷಕರು / ಉಪ ಪ್ರಾಂಶುಪಾಲರು ವೃಂದದ ಹುದ್ದೆಗೆ ಬಡ್ತಿಗೆ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದವು ಪೋಷಕ ವೃಂದವಾಗಿರುತ್ತದೆ. ಮುಖ್ಯ ಶಿಕ್ಷಕರ ವೃಂದಕ್ಕೆ, ವೃಂದ ಮತ್ತು ನೇಮಕಾತಿ ನಿಯಮದಂತೆ ನಿಗದಿಪಡಿಸಿರುವ ವಿದ್ಯಾರ್ಹತೆ ಎಂದರೆ ಪದವಿ ಜೊತೆಗೆ ಶೈಕ್ಷಣಿಕ ಆಡಳಿತಕ್ಕೆ ಅಗತ್ಯ ಇರುವ ಬಿ.ಎಡ್ ಪದವಿ. ದೈಹಿಕ ಶಿಕ್ಷಣ ಶಿಕ್ಷಕರು ಬಿ.ಎಡ್. ಪದವಿಯನ್ನು ಹೊಂದಿರುವುದಿಲ್ಲ.

ಮುಖ್ಯ ಶಿಕ್ಷಕರು ಬೋಧನೆಯಲ್ಲಿ ಪ್ರಾವೀಣ್ಯತೆ ಹಾಗೂ ಅನುಭವವನ್ನು ಹೊಂದಿರುತ್ತಾರೆ. ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ಮಾಡುತ್ತಾರೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆ ತರಬೇತಿ ಆಗಿಲ್ಲದೆ ಇರುವುದರಿಂದ ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆÉಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಮುಖ್ಯ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು / ಹಿರಿಯ ಉಪನ್ಯಾಸಕರು ನಿರ್ದೇಶಕರು ಮಧ್ಯಾಹ್ನ ಯೋಜನೆ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹುದ್ದೆಗಳಿಗೆ ಭರ್ತಿ ಹೊಂದಲು ಅವಕಾಶವಿರುತ್ತದೆ. ಈ ಎಲ್ಲಾ ಹುದ್ದೆಗಳು ಶೈಕ್ಷಣಿಕವಾಗಿ ಶಾಲೆಗಳಲ್ಲಿ ವಿಷಯ ಬೋಧನೆ ಅನುಭವವನ್ನು ಹಾಗೂ ಶೈಕ್ಷಣಿಕ ಮಾರ್ಗದರ್ಶನ ನೀಡುವ ಅನುಭವವನ್ನು ಅಪೇಕ್ಷಿಸುತ್ತದೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆಯ ತರಬೇತಿ ಇರುವುದಿಲ್ಲ. ಬದಲಾಗಿ ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾತ್ರ ತರಬೇತಿಯನ್ನು ಪಡೆದಿರುತ್ತಾರೆ.

ದೈಹಿಕ ಶಿಕ್ಷಣದ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿ ಕಲ್ಪಿಸಲಾಗಿದೆ. ಶೈಕ್ಷಣಿಕ ಆಡಳಿತದ ಹಿತದೃಷ್ಠಿಯಿಂದ ಪ್ರಸ್ತುತ ವೃಂದ ಮತ್ತು ನೇಮಕಾತಿ ನಿಯಮದಂತೆ ಪದವಿ ಹಾಗೂ ಶಿಕ್ಷಣದಲ್ಲಿ ಪದವಿ ವಿದ್ಯಾರ್ಹತೆ ಪೋಷಕ ವೃಂದ ಎಂಬುದಾಗಿ ಗುರುತಿಸಿರುವ ವೃಂದದಿಂದ ಮುಖ್ಯ ಶಿಕ್ಷಕರ ವೃಂದಕ್ಕೆ ಬಡ್ತಿಗಳನ್ನು ಪರಿಗಣಿಸಲಾಗುತ್ತಿದೆ. ಅದಗ್ಯೂ ದೈಹಿಕ ಶಿಕ್ಷಕರಿಗೆ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಆದೇಶಗಳನ್ನು ಪರಿಶೀಲಿಸಿ ನಂತರ ಮಾನ್ಯ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಉನ್ನತ ಶಿಕ್ಷಣದ ಗುಣ ಮಟ್ಟ ಕಾಪಾಡುವುದು ಇಲಾಖೆಯ ಕರ್ತವ್ಯ
ವಿಶ್ವವಿದ್ಯಾಲಯಗಳಲ್ಲಿ ಭೋದಕ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮವಹಿಸಲಾಗುವುದು – ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್

ಬೆಂಗಳೂರು, ಮಾರ್ಚ್ 17, (ಕರ್ನಾಟಕ ವಾರ್ತೆ):

ಉನ್ನತ ಶಿಕ್ಷಣದ ಗುಣ ಮಟ್ಟ ಕಾಪಾಡುವುದು ಇಲಾಖೆಯ ಬದ್ದತೆಯಾಗಿದೆ. ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಭೋದಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ಸದಸ್ಯ ಎಸ್.ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ನಿವೃತ್ತಿ, ನಿಧನ ಹಾಗೂ ಇತ್ಯಾದಿ ಕಾರಣಗಳಿಂದಾಗಿ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಬೋಧಕ 416, ಬೋಧಕೇತರ 849, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ 234, ಬೋಧಕೇತರ 780, ಮೈಸೂರು ವಿಶ್ವವಿದ್ಯಾಲಯದಲ್ಲಿ ಬೋಧಕ 380, ಬೋಧಕೇತರ 368 ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಬೋಧಕ 171, ಬೋಧಕೇತರ 268 ಹುದ್ದೆಗಳು ಖಾಲಿ ಇವೆ. ಈ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ವಿಶ್ವವಿದ್ಯಾಲಯಗಳಿಂದ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದ್ದು, ಪ್ರಸ್ತಾವನೆಗಳು ಪರಿಶೀಲನೆಯಲ್ಲಿವೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಸುಮಾರು 2800 ಬೋಧಕ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಹಿಂದಿನಿಂದಲೂ ತುಂಬಿರುವುದಿಲ್ಲ. ಸರ್ಕಾರ ಈಗ ಈ ಹುದ್ದೆಗಳನ್ನು ತುಂಬಲು ಕ್ರಮ ವಹಿಸಿದೆ. ರಾಯಚೂರಿನಲ್ಲಿ 25 ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆ ನೇಮಕಕ್ಕೆ ಕೆ.ಇ.ಎ ಯಿಂದ ಪರೀಕ್ಷೆ ಸಹ ನಡೆಸಲಾಗಿದೆ. ಎಲ್ಲಾ ಹುದ್ದೆಗಳನ್ನು ತರ್ಕಬದ್ಧವಾಗಿ ಮಾಡಿ ಆರ್ಥಿಕ ಇಲಾಖೆಯ ಅನುಮೋದನೆ ಪಡೆದುಕೊಂಡು ಅಗತ್ಯ ಕ್ರಮ ಜರುಗಿಸಲಾಗುವುದು.

ದೂರ ಶಿಕ್ಷಣ ಇದ್ದಾಗ ವಿಶ್ವವಿದ್ಯಾಲಯಗಳಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಢೀಕೃತವಾಗುತ್ತಿತ್ತು. ಕರ್ನಾಟಕ ವಿಶ್ವವಿದ್ಯಾಲಯ ಪ್ರಾರಂಭವಾದ ನಂತರ ದೂರ ಶಿಕ್ಷಣ ನಿಂತು ಹೋಯಿತು. ಇದರಿಂದಾಗಿ ವಿಶ್ವವಿದ್ಯಾಲಯಗಳಲ್ಲಿ ಆರ್ಥಿಕ ಸಂಪನ್ಮೂಲದ ಕೊರತೆಯಾಗಿದೆ. ವಿಶ್ವವಿದ್ಯಾಲಯಗಳ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಚಿಂತಸಲಾಗುತ್ತಿದೆ. ಕರ್ನಾಟಕ ವಿಶ್ವವಿದ್ಯಾಲಯದ ಮೇಲೆ ಸುಮಾರು 140 ಕೋಟಿ ರೂ ಹೊರೆ ಬಿದ್ದಿದೆ. ಈ ಬಗ್ಗೆ ಚರ್ಚೆ ಮಾಡಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು. ಎಲ್ಲಾ ವಿಶ್ವವಿದಯಾಲಯಗಳಲ್ಲಿ ಇರುವ ಹುದ್ದೆಗಳನ್ನು ಗುರುತಿಸಿ ತರ್ಕಬದ್ಧವಾಗಿ, ವೈಜ್ಞಾನಿಕವಾಗಿ ಮಾಡಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲು ಕ್ರಮ ವಹಿಸಲಾಗುವುದು.

ವಿಶ್ವವಿದ್ಯಾಲಯಗಳ ಉಳಿದ / ಹೆಚ್ಚುವರಿ ಪಿಂಚಣಿ ಅನುದಾನದ ಕೋರಿಕೆಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ವಿಶ್ವವಿದ್ಯಾಲಯಗಳ ಆಂತರಿಕ ಸಂಪನ್ಮೂಲದಿಂದ ಭರಿಸುವಂತೆ ಹಾಗೂ ಹೆಚ್ಚುವರಿ ಅನುದಾನವನ್ನು ಒದಗಿಸಲು ಸಾಧ್ಯವಿಲ್ಲವೆಂದು ತಿಳಿಸಿರುತ್ತದೆ. ಈ ಬಗ್ಗೆ ಸರ್ಕಾರ ರಚಿಸಿರುವ ಉಪ ಸಮಿತಿಯಲ್ಲಿ ಪರಿಹಾರ ಹುಡುಕಲು ಪರಿಶೀಲಿಸಲಾಗುವುದು ಎಂದು ಸಚಿವರು ತಿಳಿಸಿದರು.

ಯುವನಿಧಿ ಯೋಜನೆ – ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರಕ್ಕೆ ಕ್ರಮ : ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಬೆಂಗಳೂರು, ಮಾರ್ಚ್ 17, (ಕರ್ನಾಟಕ ವಾರ್ತೆ):

ಯುವನಿಧಿ ಯೋಜನೆಯ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯುವ ನಿಧಿಯೋಜನೆಯಡಿ 2025ನೇ ಮಾರ್ಚ್ 10ರ ಅಂತ್ಯಕ್ಕೆ ಒಟ್ಟು 2,62,207 ಅಭ್ಯರ್ಥಿಗಳು ನೋಂದಾಯಿಸಿರುತ್ತಾರೆ. ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್ 2023ರ ಸೆಕ್ಷನ್ 6 ಅನ್ವಯ ಸಂಬಂಧಿಸಿದ ಫಲಾನುಭವಿ ದತ್ತಾಂಶವನ್ನು ಅವರ ಒಪ್ಪುಗೆ ಇಲ್ಲದೆ ಮೊತ್ತೊಬ್ಬರಿಗೆ ಹಂಚಲು ಅವಕಾಶ ಇರುವುದಿಲ್ಲ. ಯುವನಿಧಿ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳ ವೈಯಕ್ತಿಕ ದತ್ತಾಂಶವನ್ನು / ಪೂರ್ಣ ಮಾಹಿತಿಯುಳ್ಳ ಪಟ್ಟಿಯನ್ನು ಫಲಾನುಭವಿಗಳ ಒಪ್ಪಿಗೆ ಇಲ್ಲದೆ ಮೂರನೇ ವ್ಯಕ್ತಿಗಳಿಗೆ ಒದಗಿಸಲು ಅವಕಾಶ ವಿರುವುದಿಲ್ಲ.

ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ಪಾಸಾಗಿ 6 ತಿಂಗಳ (180 ದಿನ) ಒಳಗೆ ನೌಕರಿ ಸಿಗಲಿಲ್ಲ ಎಂದಾಗ ಮಾತ್ರ ಯುವನಿಧಿ ಯೋಜನೆಯಡಿ ಬರುತ್ತಾರೆ. ಕರ್ನಾಟಕ ರಹವಾಸಿಯಾಗಿರುವುದಕ್ಕೆ ದಾಖಲೆ ಪರಿಶೀಲನೆಗೆ ಡಿಡಿಪಿಐ, ಡಿಡಿಪಿಯು ಮತ್ತು ಡಿಇಇಒ ಇವರ ಲಾಗಿನ್‍ಗಳಲ್ಲಿ ಒಟ್ಟು 16,648 ಅರ್ಜಿಗಳು ಭೌತಿಕ ಪರಿಶೀಲನೆ ಬಾಕಿ ಇರುತ್ತವೆ. ಯುವನಿಧಿ ಯೋಜನೆಯಡಿ ಜನವರಿ 2025ರ ಅಂತ್ಯಕ್ಕೆ 1,74,170 ಫಲನುಭವಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ ಎಂದು ತಿಳಿಸಿದರು.

ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಕ್ರಮ :
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಜಿಟಿಟಿಸಿ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಮುಖೇನ 2065 ಅಭ್ಯರ್ಥಿಗಳಿಗೆ ತರಬೇತಿಯು ಪೂರ್ಣಗೊಂಡಿದ್ದು, 9130 ಅಭ್ಯರ್ಥಿಗಳಿಗೆ ತರಬೇತಿ ನಡೆಯುತ್ತಿರುತ್ತದೆ. ಹಾಗೂ ಐಎಲ್‍ಸಿ ಮತ್ತು ಪ್ಯೂಚರ್ ಸ್ಕಿಲ್ಸ್ ಕಾರ್ಯಕ್ರಮದ ಮುಖೇನ 120 ಅಭ್ಯಥಿಗಳಿಗೆ ತರಬೇತಿ ಪೂರ್ಣಗೊಂಡಿದ್ದು, 717 ಅಭ್ಯರ್ಥಿಗಳಿಗೆ ತರಬೇತಿ ನಡೆಯುತ್ತಿರುತ್ತದೆ. ಉಳಿದಂತೆ ಕಲಿಕೆ ಜೊತೆ ಕೌಶಲ್ಯ ಕಾರ್ಯಕ್ರಮದಡಿ 28893 ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ತರಬೇತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಆಹಾರ ಸುರಕ್ಷತಾ ಪ್ರಾಧಿಕಾರದಲ್ಲಿ ಎರವಲು ಸೇವೆಯಲ್ಲಿ ಕಾರ್ಯ ನಿರ್ವಹಿಸುವವರನ್ನು ವಾಪಸ್ಸು ಪಡೆಯಲಾಗುವುದು – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಮಾರ್ಚ್ 17, (ಕರ್ನಾಟಕ ವಾರ್ತೆ):
ಆಹಾರ ಸುರಕ್ಷತಾ ಪ್ರಾಧಿಕಾರದಲ್ಲಿ ಎರಲು ಸೇವೆಯಲ್ಲಿರುವವರನ್ನು ವಾಪಸ್ಸು ಪಡೆಯಲಾಗುವುದು. ವೈದ್ಯರ ಅಗತ್ಯತೆ ಇಲಾಖೆ ಇದೆ. ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 130 ಅಧಿಕಾರಿ ನೌಕರರು ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದು, ಅವರನ್ನು ಇಲಾಖೆಗೆ ವಾಪಸ್ಸು ಪಡೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಶರವಣ ಟಿ.ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಹಲವಾರು ಬಾರಿ ವಾಪಸ್ಸು ಪಡೆಯಲು ಅದೇಶ ಮಾಡಿದ್ದರೂ ಸಹ ಅಧಿಕಾರಿಗಳು ಕರ್ನಾಟಕ ಆಡಳಿತ ನ್ಯಾಯಾಲಯದಲ್ಲಿ (ಕೆ.ಎ.ಟಿ) ಮೊಕ್ಕದ್ದಮೆ ಹೂಡಿ, ಸ್ಟೇ ತಂದು ಅಲ್ಲೇ ಮುಂದುವರೆಯುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಅಧಿಕಾರಿ / ನೌಕರರನ್ನು ವಾಪಸ್ಸು ಪಡೆಯಲು ಕ್ರಮ ವಹಿಸಲಾಗುವುದು.

ಕೆಲ ಅಧಿಕಾರಿಗಳು ನಕಲಿ ಅಂಕಪಟ್ಟಿ ಸಲ್ಲಿಸಿರುವ ದೂರಿನನ್ವಯ ಇಲಾಖೆಗೆ ಬಂದಂತಹ ದೂರಿನ ಆಧಾರದ ಮೇರೆಗೆ ಮುಖ್ಯ ಜಾಗೃತಾಧಿಕಾರಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರು ತನಿಖೆ ನಡೆಸಿ 2016ನೇ ಫೆಬ್ರವರಿ 23 ರಂದು ತನಿಖಾ ವರದಿ ಸಲ್ಲಿಸಿದ್ದು, ಸಿಬ್ಬಂದಿಗಳ ವಿದ್ಯಾರ್ಹತೆ ನೈಜತೆ ಬಗ್ಗೆ ಖಾತರಿಪಡಿಸಿಕೊಳ್ಳಳು ಸೂಚಿಸಿದ್ದು, ಅದರಂತೆ ನಿರ್ದೇಶನಾಲಯವು 2017ನೇ ಮಾರ್ಚ್ 31ರ ಪತ್ರದಲ್ಲಿ ಮೈಸೂರಿನ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಇವರಿಗೆ ಕೋರಲಾಗಿತ್ತು. ಅಂಕಪಟ್ಟಿ ಪರಿಶೀಲಿಸಿದ ವಿಶ್ವವಿದ್ಯಾಲಯ 6 ಕಿರಿಯ ಆರೋಗ್ಯ ಸಹಾಯಕರುಗಳ ದಾಖಲಾತಿಗಳು ನೈಜತೆಯಿಂದ ಕೂಡಿರುವುದಿಲ್ಲ ಎಂದು ವರದಿ ನೀಡಿರುತ್ತಾರೆ. ಇದರ ಆಧಾರದ ಮೇಲೆ ಸುಳ್ಳು ಅಂಕಪಟ್ಟಿ ಪತ್ತು ಪ್ರಮಾಣ ಪತ್ರಗಳನ್ನು ನೀಡಿದ್ದ 6 ಕಿರಿಯ ಸಹಾಯಕರುಗಳನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ 2018ನೇ ಜನವರಿ 10 ರಂದು ಅಮಾನತ್ತುಗೊಳಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದರು.

Tags: Bureau Newsnewnewspolicyಅಭಿವೃದ್ಧಿಅವಕಾಶಆದೇಶಆರೋಗ್ಯಆರ್ಥಿಕಇನ್ಇಲಾಖೆಯಉತ್ತರಉದ್ಯಮಶೀಲತೆಉನ್ನತಕರ್ನಾಟಕಕಾನೂನುಕಾರ್ಯಕ್ರಮಕ್ರಮಖಾತರಿಗ್ರಾಮೀಣಜಿಲ್ಲೆಜೀವನಡಾ.ಡಿಡಿಜಿಟಲ್ತಾಲ್ಲೂಕುತೀರದರ್ಶನದಿನದೇಶನದಿನಿಯಂತ್ರಣನಿಯಮನೀತಿನೇಮಕಾತಿನ್ಯಾಯಾಲಯದಪರೀಕ್ಷೆಪಿಂಚಣಿಪ್ರಚಾರಬೆಂಗಳೂರುಮತ್ತುಮಾಪನಮಾರ್ಗಮಾರ್ಚ್ಮೈಸೂರಿನಮೈಸೂರುಯುವಯೋಗಯೋಜನೆಯೋಜನೆಗಳರಾಜ್ಯರಿಯಲ್ರೋಗವಿದ್ಯಾರ್ಥಿವಿಶ್ವವೈದ್ಯಕೀಯಶಾಲೆಗಳಶಿಕ್ಷಕರಶಿಕ್ಷಣಸಚಿವಸಂಬಂಧಸಂಬಂಧಿಸರ್ಕಾರಿಸಹಾಯಸಾಲಸುರಕ್ಷತಾಸೇವೆಗಳುಹುದ್ದೆಗಳ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

October 19, 2025

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

October 19, 2025

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

October 19, 2025

ಗುತ್ತಿಗೆದಾರರ ಬಾಕಿ ಬಿಲ್ ಕೇಳಿದರೆ ಧಮ್ಕಿಯೇ?: ಡಿಕೆ ಶಿವಕುಮಾರ್‌ಗೆ ಆರ್. ಅಶೋಕ್ ಪ್ರಶ್ನೆ

October 19, 2025

Recent News

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

October 14, 2025

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

October 14, 2025

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

October 13, 2025

ತಿಪಟೂರಿನಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ

October 11, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.