ಕಲಬುರಗಿ: ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ತಮ್ಮನ್ನು ಟೀಕಿಸಿದ ಐಟಿ ಉದ್ಯಮಿ ಟಿ.ವಿ. ಮೋಹನ್ ದಾಸ್ ಪೈಗೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಉತ್ತರ ನೀಡಿದ್ದಾರೆ.
“ನಾವು ಜವಾಬ್ದಾರರಾಗಿದ್ದೇವೆ. ನಮ್ಮ ರಾಷ್ಟ್ರವನ್ನು ಮುನ್ನಡೆಸಲು ಹಾಗೂ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕ ಶಕ್ತಿ ಕೇಂದ್ರವನ್ನು ನಿರ್ಮಿಸುವ ಜವಾಬ್ದಾರಿಯಿಂದ ನಾವು ಹಿಂದೆ ಸರಿದಿಲ್ಲ, ಮುಂದೆ ಕೂಡಾ ಸರಿಯುವುದಿಲ್ಲ,” ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ನಾನು ಕಳೆದ 30 ವರ್ಷಗಳಿಂದ ಬೆಂಗಳೂರು ಅಭಿವೃದ್ಧಿಗಾಗಿ ನಿರಂತರವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ, ನೀವು ಸರ್ಕಾರದ ಜವಾಬ್ದಾರಿಯಲ್ಲಿದ್ದೀರಿ. ಕಳೆದ ಎರಡು ವರ್ಷಗಳಲ್ಲಿ ಏನು ಸಾಧನೆ ಮಾಡಿದ್ದೀರಿ? ಎಂದು ಮೋಹನ್ ದಾಸ್ ಪೈ ಅವರು ಸಾಮಾಜಿಕ ಮಾಧ್ಯಮ ಎಕ್ಸ್ (ಹಳೆಯ ಟ್ವಿಟ್ಟರ್) ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನಿಸಿದ್ದರು.
ಈಗೆ ಪ್ರತಿಯಾಗಿ ಖರ್ಗೆ, “ಕಾಂಗ್ರೆಸ್ ಅಧಿಕಾರದಲ್ಲಿರುವಾಗ ನಿಮ್ಮ ಧ್ವನಿ, ಸಂದೇಶ ಹಾಗೂ ನಿಲುವು ಬಹಳ ಸ್ಪಷ್ಟವಾಗಿರುತ್ತದೆ,” ಎಂದು ವ್ಯಂಗ್ಯವಾಡಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ನ್ಯಾಯಯುತ ಹಕ್ಕುಗಳಿಗಾಗಿ ಮುಂದೊಂದು ದಿನ ನೀವೂ ಕೂಡಾ ವಕಾಲತ್ತು ವಹಿಸುವಿರಿ ಎಂಬ ಆಶಯ ವ್ಯಕ್ತಪಡಿಸಿರುವ ಸಚಿವರು, “ನಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯುವುದಿಲ್ಲ,” ಎಂಬ ಸಂದೇಶವನ್ನು ಪುನರುಚರಿಸಿದ್ದಾರೆ.