ಬೆಂಗಳೂರು: ಪೂರ್ವ ವಿಭಾಗದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ದೇವರಾಜ್, ಸಹಾಯಕ ಪೊಲೀಸ್ ಆಯುಕ್ತರಾದ (ಎಸಿಪಿ) ಗೀತಾ ಮತ್ತು ಉಮಾಶಂಕರ್, ಹಾಗೂ ಭಾರತಿ ನಗರ ಠಾಣೆಯ ಇನ್ಸ್‌ಪೆಕ್ಟರ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟಚಲಪತಿ ಅವರು ಪೊಲೀಸ್ ಮಹಾನಿರ್ದೇಶಕರು (ಡಿಜಿ & ಐಜಿಪಿ) ಗೆ ದೂರು ಸಲ್ಲಿಸಿದ್ದಾರೆ.
ಕೊಲೆಯಾದ ರೌಡಿಶೀಟರ್ ಬಿಕ್ಲು ಶಿವ ಈ ಹಿಂದೆ ಬೈರತಿ ಬಸವಾರ್ ಮತ್ತು ಇತರ ಆರೋಪಿಗಳ ವಿರುದ್ಧ ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರು ನೀಡಿದ್ದ. ಆದರೆ, ಈ ದೂರಿನ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ವೆಂಕಟಚಲಪತಿ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಡಿಸಿಪಿ ದೇವರಾಜ್, ಎಸಿಪಿ ಗೀತಾ, ಎಸಿಪಿ ಉಮಾಶಂಕರ್, ಮತ್ತು ಭಾರತಿ ನಗರ ಠಾಣೆಯ ಇನ್ಸ್‌ಪೆಕ್ಟರ್ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ವೆಂಕಟಚಲಪತಿ ಅವರು ಡಿಜಿ & ಐಜಿಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಈ ದೂರು ಸಂಬಂಧಿತ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ಗಮನ ಸೆಳೆದಿದ್ದು, ಮುಂದಿನ ಕ್ರಮದ ಬಗ್ಗೆ ಕುತೂಹಲ ಮೂಡಿಸಿದೆ.