ಬೆಂಗಳೂರು: ಹಿರಿಯ ಶಿಕ್ಷಣ ತಜ್ಞರು, ಪಿಇಎಸ್ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರು, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಆರ್. ದೊರೆಸ್ವಾಮಿ ಅವರು ವಿಧಿವಶರಾಗಿದ್ದಾರೆ. ಅವರ ನಿಧನದಿಂದ ರಾಜ್ಯವು ಒಬ್ಬ ಮಹಾನ್ ಶಿಕ್ಷಣ ತಜ್ಞರನ್ನು ಕಳೆದುಕೊಂಡಿದೆ.
ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದ ದೊರೆಸ್ವಾಮಿ ಅವರು ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಅವರ ದುಃಖದ ಸುದ್ದಿಗೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವೈಯಕ್ತಿಕವಾಗಿ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಬಿ . ಎಸ್ ಯಡಿಯೂರಪ್ಪರವರು ಹಾಗೂ ಗಣ್ಯರು ವಿಷಾದ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಪ್ರಾರ್ಥಿಸುತ್ತೇನೆ.