ಬಳ್ಳಾರಿ: ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಬಳ್ಳಾರಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಆಯೋಜಿಸಲಾಗಿದ್ದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಬದ್ಧವಾಗಿದ್ದು, ಸ್ಮಾರ್ಟ್ ಕಾರ್ಡ್ ಮೂಲಕ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಲಾಭ ಸುಲಭವಾಗಿ ಸಿಗುವಂತೆ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ಸಂಸದ ಇ.ತುಕಾರಾಂ, ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ, ಶಾಸಕರಾದ ಜೆ.ಎನ್.ಗಣೇಶ್, ಶ್ರೀಮತಿ ಅನ್ನಪೂರ್ಣ ತುಕಾರಾಮ್, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿದಾನಂದಪ್ಪ, ಮಹಾನಗರಪಾಲಿಕೆ ಮಹಾಪೌರ ಮೂಲಂಗಿ ನಂದೀಶ್, ಕಾರ್ಮಿಕ ಇಲಾಖೆ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತ ಡಾ.ಎಸ್.ಬಿ.ರವಿಕುಮಾರ್, ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಸೇರಿದಂತೆ ಇತರ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವುದರ ಜೊತೆಗೆ, ರಾಜ್ಯ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಈ ಯೋಜನೆಗಳು ಅವರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಲಿವೆ ಎಂದು ತಿಳಿಸಲಾಯಿತು.