ಬಳ್ಳಾರಿ: ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಬಳ್ಳಾರಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿಯಾಗಿ ಆಯೋಜಿಸಿದ್ದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಉದ್ಘಾಟಿಸಿದರು.ಸಚಿವ ಸಂತೋಷ್ ಲಾಡ್ ಮಾತನಾಡಿ, ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಸ್ಮಾರ್ಟ್ ಕಾರ್ಡ್ ಮೂಲಕ ಸಾಮಾಜಿಕ ಭದ್ರತೆ, ಆರೋಗ್ಯ ಸೇವೆಗಳು ಮತ್ತು ಇತರ ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ಸುಲಭವಾಗಿ ಪಡೆಯಲು ಸಹಾಯವಾಗಲಿದೆ ಎಂದರು.ಕಾರ್ಯಕ್ರಮದಲ್ಲಿ ಬಳ್ಳಾರಿ ಸಂಸದ ಇ.ತುಕಾರಾಂ, ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ, ಶಾಸಕರಾದ ಜೆ.ಎನ್.ಗಣೇಶ್, ಶ್ರೀಮತಿ ಅನ್ನಪೂರ್ಣ ತುಕಾರಾಮ್, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿದಾನಂದಪ್ಪ, ಮಹಾನಗರಪಾಲಿಕೆ ಮಹಾಪೌರ ಮೂಲಂಗಿ ನಂದೀಶ್, ಕಾರ್ಮಿಕ ಇಲಾಖೆ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತ ಡಾ.ಎಸ್.ಬಿ.ರವಿಕುಮಾರ್, ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಸೇರಿದಂತೆ ಇತರ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.












