ಬೆಂಗಳೂರು: ಮಹಾ ಮಾನವತಾವಾದಿ ಮತ್ತು ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಅಂಗವಾಗಿ, ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಪುಷ್ಪಮಾಲಾರ್ಪಣೆ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.