ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ನಡೆಯಲಿರುವ ಅನುಭವ ಮಂಟಪ–ಬಸವಾದಿ ಶರಣರ ವೈಭವದ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧಿಕೃತ ಲಾಂಛನವನ್ನೂ ಅವರು ಬಿಡುಗಡೆಗೊಳಿಸಿದರು.
ಈ ಸಮಾರಂಭದಲ್ಲಿ ನಿಜಗುಣಾನಂದ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್, ಇಂಧನ ಸಚಿವ ಕೆ.ಜೆ. ಜಾರ್ಜ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಸಾಹಿತಿ ಹಂಪ ನಾಗರಾಜಯ್ಯ, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.
ಬಸವಣ್ಣನವರ ತತ್ವ–ದರ್ಶನಗಳನ್ನು ಮನೆಮಾಡಿಕೊಂಡಿರುವ ಅನುಭವ ಮಂಟಪ ಯೋಜನೆ, ವಿಶ್ವದ ಶ್ರೀಮಂತ ಆದರ್ಶ ಕೇಂದ್ರವಾಗಿ ಬೆಳೆಯಲಿದೆ ಎಂಬ ವಿಶ್ವಾಸ ಈ ಸಂದರ್ಭದಲ್ಲಿ ವ್ಯಕ್ತವಾಯಿತು.