ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ನಾಯಕತ್ವ ಕೊನೆಗೂ ರೆಬೆಲ್ ಬಣದ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ, ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ದೂರ ಇರಿಸಲು ತೀರ್ಮಾನಿಸಲಾಗಿದೆ. ಈ ಉಚ್ಚಾಟನೆ ಈಗಿನಿಂದಲೇ ಜಾರಿಗೆ ಬರಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಯತ್ನಾಳ್ ಅವರ ಪಕ್ಷವಿರೋಧಿ ವರ್ತನೆ ಹಾಗೂ ಬಿಜೆಪಿಯ ಹೈಕಮಾಂಡ್ ವಿರುದ್ಧ ನಿರಂತರ ಟೀಕೆಗಳ ಹಿನ್ನೆಲೆ, ಇಂತಹ ಕ್ರಮಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ನಿರ್ಧಾರದಿಂದ ಬಿಜೆಪಿಯ ಒಳಜಗಳ ಮತ್ತಷ್ಟು ಮುತ್ತಿಗೆಗೆ ಸಿಕ್ಕಿರುವುದು ಸ್ಪಷ್ಟವಾಗಿದೆ.