ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮೀಕ್ಷೆ ನಡೆಸಲು ಎಲ್ಲಾ 8 ವಲಯಗಳ ಜಂಟಿ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ರವರು ತಿಳಿಸಿದರು.
ಸಂವಿಧಾನದ ಕಲಂ 21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ಶಾಲೆಯಿಂದ ಹೊರಗುಳಿದ The Karnataka Right of Childern to Free and Compulsory Education Rules, 2012 ರನ್ವಯ ಸ್ಥಳೀಯ ಸಂಸ್ಥೆಗಳು ಶಿಕ್ಷಣ ರಿಜಿಸ್ಟನ್ನು ನಿರ್ವಹಿಸಬೇಕಾಗಿರುತ್ತದೆ. The Karnataka Right of Childern to Free and Compulsory Education (Amendement) Rules, 2014 ರನ್ವಯ ಮಕ್ಕಳ ಹಾಜರಾತಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ತಿಳಿಸಲಾಗಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು ಹಾಗೂ ಶಾಲೆಗೆ ದಾಖಲಾಗದ ಮಕ್ಕಳ ಬಗ್ಗೆ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ವಿಚಾರಣಾ ಪ್ರಕ್ರಿಯೆ ಚಾಲನೆಯಲ್ಲಿರುವುದರಿಂದ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆಯನ್ನು ಗುರುತಿಸುವುದು ಅವಶ್ಯಕವಾಗಿದೆ.
ಅದರಂತೆ, ಸದರಿ ಸಮೀಕ್ಷೆನ್ನು ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖಾ ವತಿಯಿಂದ Karnataka Government App Store ನಲ್ಲಿರುವ “Karnataka H2H Children Survey App” ಎಂಬ ಮೊಬೈಲ್ ಆಪ್ ಮೂಲಕ ಸಮೀಕ್ಷೆ ನಡೆಸಬೇಕಾಗಿರುತ್ತದೆ.
ಮುಂದುವರೆದು, ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ 2024-25ನೇ ಸಾಲಿಗೆ ಪಾಲಿಕೆ ವ್ಯಾಪ್ತಿಯಲ್ಲಿನ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆಯನ್ನು ಗುರುತಿಸುವ ಸಮೀಕ್ಷೆಯ ಸಂಬಂಧ ವಲಯವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿರುತ್ತದೆ.
24ನೇ ಫೆಬ್ರಬರಿ 2025 ರಿಂದ ಸಮೀಕ್ಷೆ ಆರಂಭ:
ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವಂತಹ ಎಲ್ಲಾ ಮನೆಗಳನ್ನು ಉಚ್ಛ ನ್ಯಾಯಾಲಯದ ನಿರ್ದೇಶನದಂತೆ 24ನೇ ಫೆಬ್ರಬರಿ 2025ರಿಂದ ಪಾಲಿಕೆಯ ಎಂಟು ವಲಯಗಳಲ್ಲಿ ಮನೆ ಮನೆ ಸಮೀಕ್ಷೆಯ ಮಾಡಬೇಕು. ಅದಕ್ಕಾಗಿ ಪ್ರತಿ ವಾರ್ಡ್‌ಗೆ ಸುಮಾರು 10 ಗಣತಿದಾರರನ್ನು ನೇಮಿಸಲಾಗಿದ್ದು, ಸದರಿ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಿ 6 ರಿಂದ 18 ವರ್ಷದ ವಯಸ್ಸಿನ ಎಲ್ಲರನ್ನೂ ಸಮೀಕ್ಷೆ ಕೈಗೊಳ್ಳಲಿದ್ದು, ಅದಕ್ಕೆ ಸಾರ್ವಜನಿಕರು ಸಹಕರಿಸಲು ಮೂಲಕ ಕೋರಿದೆ.