ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರುವರಿ 26, 2025 (ಬುಧವಾರ) ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳು ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಆದೇಶದ ಅನ್ವಯ, ನಗರದೆಲ್ಲೆಡೆ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಡೆಸುವುದನ್ನು ನಿಷೇಧಿಸಲಾಗಿದ್ದು, ಅದನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಈ ಆದೇಶಕ್ಕೆ ಸಹಕರಿಸಬೇಕೆಂದು ಬಿಬಿಎಂಪಿ ಮನವಿ ಮಾಡಿದೆ.