ಬೆಂಗಳೂರು: ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆಳವಾದ ಸಂತಾಪ ಸೂಚಿಸಿದ್ದಾರೆ.
“ಹಿಂದೆ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಮೇಟಿ ಅವರು ಸಚಿವರಾಗಿದ್ದರು. ಆ ಸಮಯದಲ್ಲಿ ನಾನು ಇನ್ನೂ ಶಾಸಕಿಯಾಗಿರಲಿಲ್ಲ. ಆದರೂ ಅವರು ನನಗೆ ಅನೇಕ ಕೆಲಸಗಳನ್ನು ಮಾಡಿಕೊಟ್ಟಿದ್ದರು. ಸಮಾಜದಲ್ಲಿ ಅವರಿಗೆ ವಿಶಿಷ್ಟವಾದ ಸ್ಥಾನಮಾನವಿತ್ತು. ಆ ಭಾಗದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಶಕ್ತಿ ಮತ್ತು ದೂರದೃಷ್ಟಿ ಅವರಲ್ಲಿತ್ತು” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೆನಪಿಸಿಕೊಂಡರು.
ಪಕ್ಷದ ಹಿರಿಯ ಮುಖಂಡರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ ಮೇಟಿ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುವೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಅವರು ಹಾರೈಸಿದರು.












