ಬೆಂಗಳೂರು: ನಮ್ಮ ಮೆಟ್ರೋ ಸೇವೆಗಳ ಭದ್ರತಾ ಶುಲ್ಕ ಶೇ. 46% ಹೆಚ್ಚಳ ಮಾಡಿದ ಕ್ರಮವನ್ನು ಖಂಡಿಸಿ ಜಯನಗರ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ತೆಗೆದುಕೊಂಡಿರುವ ಈ ನಿರ್ಧಾರ ಸಾರ್ವಜನಿಕರ ಮೇಲೆ ಆರ್ಥಿಕ ಹೊರೆ ತರುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಬಿಬಿಎಂಪಿ ಮಾಜಿ ಸದಸ್ಯರು, ಬೆಂಗಳೂರು ಬಿಜೆಪಿ ದಕ್ಷಿಣ ಜಿಲ್ಲಾ ಮಂಡಲದ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ವಿರೋಧ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಮೆಟ್ರೋ ಸೇವೆಗಳ ಭದ್ರತಾ ಶುಲ್ಕ ತಕ್ಷಣ ಹಿಂದಕ್ಕೆ ಪಡೆಯಲು ಆಗ್ರಹಿಸಿದರು. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಹೊಸ ದರವನ್ನು ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು.