ಮೈಸೂರು: ಮೈಸೂರಿನಲ್ಲಿ ನಡೆದ ಮೂರನೇ ಆವೃತ್ತಿಯ ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವವು ಭಾನುವಾರ ವಿಜೇತರಿಗೆ ಪ್ರಶಸ್ತಿ ವಿತರಣೆಯೊಂದಿಗೆ ಪರ್ಯವಸಾನಗೊಂಡಿತು. ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಡಾ. ಎಲ್. ಮುರುಗನ್ ಸಮಾರೋಪ ಭಾಷಣ ನಡೆಸಿ, ವಿಜೇತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಹಿರಿಯ ನಟ ಹಾಗೂ ನಿರ್ದೇಶಕ ಸುನೀಲ್ ಪುರಾಣಿಕ್, ಉದ್ಯಮಿ ಜಗನ್ನಾಥ ಶೆಣೈ, ಮೈಸೂರು ಸಿನೆಮಾ ಸೊಸೈಟಿಯ ಅಧ್ಯಕ್ಷ ಡಾ. ಚಂದ್ರಶೇಖರ ಸಿ.ಆರ್ ಮತ್ತು ಕಾರ್ಯದರ್ಶಿ ಪದ್ಮಾವತಿ ಎಸ್. ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಚಲನಚಿತ್ರ ಉತ್ಸವದ ಮೂಲಕ ಪ್ರತಿಭಾವಂತ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕರಿಗೆ ಉತ್ತೇಜನ ನೀಡುವುದು ಹಾಗೂ ಅವರ ಕೃತಿಗಳನ್ನು ಜಗತ್ತಿನ ಮಟ್ಟಿಗೆ ತಲುಪಿಸುವ ಉದ್ದೇಶದಿಂದ ಆಯೋಜನೆ ಮಾಡಲಾಗಿತ್ತು.