Monday, April 6, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಯುಡಿಎಫ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ, ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡುತ್ತೇವೆ: ಡಿ.ಕೆ. ಶಿವಕುಮಾರ್

PREM SHEKHAR PV by PREM SHEKHAR PV
50 seconds ago
Reading Time: 1 min read
A A
18
SHARES
50
VIEWS

ತಿರುವನಂತಪುರ: ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ, ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡುವುದಾಗಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಕೇರಳದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಿ ಉದ್ಯೋಗ ಸೃಷ್ಟಿ ಮಾಡುವುದರೊಂದಿಗೆ ರಾಜ್ಯದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಅವರು ಹೇಳಿದ್ದಾರೆ.

ತಿರುವನಂತಪುರದ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಾ ಡಿ.ಕೆ. ಶಿವಕುಮಾರ್ ಅವರು, “ಯುಡಿಎಫ್ ಸರ್ಕಾರ ರಚನೆಯಾದರೆ ಹೊಣೆಗಾರಿಕೆಯಿಂದ ಕೆಲಸ ಮಾಡುತ್ತೇವೆ. ಕೇರಳವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದಕ್ಕೆ ವ್ಯವಸ್ಥೆಯನ್ನು ಬದಲಾಯಿಸಿ, ಬಂಡವಾಳ ಹೂಡಿಕೆ ತಂದು ಉದ್ಯೋಗ ಸೃಷ್ಟಿ ಮಾಡುತ್ತೇವೆ. ಉತ್ತಮ ಕೇರಳಕ್ಕಾಗಿ ಜನರು ನಮಗೆ ಅವಕಾಶ ನೀಡಬೇಕು” ಎಂದು ಹೇಳಿದರು.

ಬಿಜೆಪಿ-ಎಲ್‌ಡಿಎಫ್ ನಡುವೆ ಒಳಒಪ್ಪಂದ ಆರೋಪ

ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ನಡೆದ ಚಿನ್ನದ ಕಳವು ಪ್ರಕರಣವನ್ನು ಉಲ್ಲೇಖಿಸಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಮತ್ತು ಎಲ್‌ಡಿಎಫ್ ನಡುವೆ ಒಳಒಪ್ಪಂದ ಇದೆ ಎಂದು ಆರೋಪಿಸಿದರು. “ದೇವರ ನಾಡಿನಲ್ಲಿ ದೇವರ ಚಿನ್ನವನ್ನೇ ಕದಿಯುವ ಹಗರಣ ನಡೆದರೂ ಪ್ರಧಾನಮಂತ್ರಿ ಒಂದು ಮಾತು ಆಡುತ್ತಿಲ್ಲ. ನ್ಯಾಯಾಲಯ ಖಂಡಿಸಿದರೂ ಸಿಬಿಐ ಮಧ್ಯಪ್ರವೇಶಿಸುತ್ತಿಲ್ಲ. ಆದರೆ ಕರ್ನಾಟಕದಲ್ಲಿ ಸಣ್ಣ ಪ್ರಕರಣಕ್ಕೆ ಸಿಬಿಐ, ಇಡಿ ದಾಳಿ ಮಾಡಿ ಸಚಿವರನ್ನು ಬಂಧಿಸುತ್ತವೆ. ಇದು ಬಿಜೆಪಿ-ಎಲ್‌ಡಿಎಫ್ ನಡುವಿನ ಒಳಒಪ್ಪಂದವಲ್ಲವೇ?” ಎಂದು ಪ್ರಶ್ನಿಸಿದರು.

ತಾವು ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮೂರು-ನಾಲ್ಕು ಬಾರಿ ಭೇಟಿ ನೀಡಿದ್ದು, ಇನ್ನೂ ಭೇಟಿ ನೀಡುತ್ತೇನೆ ಎಂದು ಅವರು ಹೇಳಿದರು.

ಕೇರಳದಲ್ಲಿ ಬಂಡವಾಳ ಹೂಡಿಕೆಗೆ ಅವಕಾಶವಿಲ್ಲ ಎಂದ ಆರೋಪ

ಕೇರಳದಲ್ಲಿ ಬಂಡವಾಳ ಹೂಡಿಕೆಗೆ ಅನುಕೂಲಕರ ವಾತಾವರಣವಿಲ್ಲ ಎಂದು ಡಿ.ಕೆ. ಶಿವಕುಮಾರ್ ಟೀಕಿಸಿದರು. “ಕೇರಳದ ಯುವಕರು ಹೊರ ರಾಜ್ಯಗಳು ಮತ್ತು ವಿದೇಶಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ 26 ಲಕ್ಷ ಇಂಜಿನಿಯರ್‌ಗಳಲ್ಲಿ 20% ಕೇರಳಿಗರು. ಆದರೆ ಇಲ್ಲಿ ಉದ್ಯಮಗಳಿಗೆ ಅವಕಾಶ ಕಲ್ಪಿಸಲಾಗುತ್ತಿಲ್ಲ. ಉತ್ತಮ ನೈಸರ್ಗಿಕ ಮತ್ತು ಮಾನವ ಸಂಪನ್ಮೂಲವಿದ್ದರೂ ರಾಜ್ಯ ಸರ್ಕಾರ ಉದ್ಯಮ ಬೆಳವಣಿಗೆಗೆ ವಿಫಲವಾಗಿದೆ” ಎಂದು ಹೇಳಿದರು.

ಮುಖ್ಯಮಂತ್ರಿ ಜಿಲ್ಲೆಯಲ್ಲೇ ಅಭಿವೃದ್ಧಿ ಇಲ್ಲ

ಕಣ್ಣೂರು ಜಿಲ್ಲೆಯಲ್ಲಿ (ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜಿಲ್ಲೆ) ಅಭಿವೃದ್ಧಿ ಕಾಣುತ್ತಿಲ್ಲ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು. “ಅಲ್ಲಿನ ಜನರು ಮತ್ತು ಕಾರ್ಯಕರ್ತರನ್ನು ವಿಚಾರಿಸಿದಾಗ ಅಭಿವೃದ್ಧಿ ಏನೂ ಇಲ್ಲ ಎಂದು ಹೇಳಿದರು. ಮುಖ್ಯಮಂತ್ರಿಯ ಜಿಲ್ಲೆಯಲ್ಲೇ ಅಭಿವೃದ್ಧಿ ಇಲ್ಲದಿದ್ದರೆ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದರು.

ಕಳೆದ ಹತ್ತು ವರ್ಷಗಳಿಂದ ಎಲ್‌ಡಿಎಫ್ ಸರ್ಕಾರ ಅಧಿಕಾರದಲ್ಲಿದ್ದರೂ ನಿರುದ್ಯೋಗ ಹೆಚ್ಚಾಗಿದೆ ಎಂದು ಅವರು ಹೇಳಿದರು. ಪ್ರತಿ ವರ್ಷ 25 ಲಕ್ಷ ಯುವಕರು ಉದ್ಯೋಗ ಹುಡುಕುತ್ತಾ ರಾಜ್ಯದಿಂದ ಹೊರಗೆ ಹೋಗುತ್ತಿದ್ದಾರೆ ಎಂದು ತಿಳಿಸಿದರು.

ವಿದೇಶದಲ್ಲಿರುವ ಕೇರಳಿಗರು ಮತದಾನ ಮಾಡಲು ಅವಕಾಶ ಕಲ್ಪಿಸಿ

ವಿದೇಶದಲ್ಲಿರುವ ಕೇರಳಿಗರು ಬಂದು ಮತದಾನ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು. ಯುಎಇಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ 90% ಕೇರಳಿಗರು ಅಧಿಕಾರ ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದರು. “ಇದು ಅವರ ಪ್ರಜಾಸತ್ಯಾತ್ಮಕ ಹಕ್ಕು. ಅವರಿಗೆ ಮತದಾನಕ್ಕೆ ಸಹಕಾರ ನೀಡಬೇಕು” ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ನುಡಿದಂತೆ ನಡೆದಿದ್ದೇವೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಮೊದಲ ದಿನವೇ ಅನುಮೋದಿಸಿ, 5-6 ತಿಂಗಳಲ್ಲಿ ಜಾರಿಗೊಳಿಸಿದ್ದನ್ನು ಡಿ.ಕೆ. ಶಿವಕುಮಾರ್ ಉಲ್ಲೇಖಿಸಿದರು. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮಹಿಳಾ ಸಹಾಯಧನ, ಅಕ್ಕಿ ಮತ್ತು ನಿರುದ್ಯೋಗ ಭತ್ಯೆಯನ್ನು ಜಾರಿಗೊಳಿಸಿರುವುದನ್ನು ನೆನಪಿಸಿದರು.

ಕೇರಳಕ್ಕೆ ‘ಇಂದಿರಾ ಗ್ಯಾರಂಟಿ’ ಯೋಜನೆಗಳು

ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೆ ಬಂದರೆ ಇಂದಿರಾ ಗಾಂಧಿ ಹೆಸರಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಡಿ.ಕೆ. ಶಿವಕುಮಾರ್ ಘೋಷಿಸಿದರು. ಇವುಗಳಲ್ಲಿ 25 ಲಕ್ಷದವರೆಗೆ ಆರೋಗ್ಯ ವಿಮೆ, ಹಿರಿಯ ನಾಗರಿಕರ ಪಿಂಚಣಿ 3,000 ರೂ.ಗೆ ಏರಿಕೆ, ವಿದ್ಯಾರ್ಥಿನಿಯರಿಗೆ 1,000 ರೂ. ಮಾಸಿಕ ಧನ, ಮಹಿಳೆಯರಿಗೆ ಉಚಿತ ಬಸ್ ಸಂಚಾರ ಮತ್ತು ಉದ್ಯಮಿಗಳಿಗೆ 5 ಲಕ್ಷದವರೆಗೆ ಆರ್ಥಿಕ ನೆರವು ಸೇರಿವೆ.

“ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಯುಡಿಎಫ್‌ಗೆ ಮೂರನೇ ಎರಡರಷ್ಟು ಬಹುಮತ ಸಿಗುವ ವಿಶ್ವಾಸವಿದೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಈ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಎಲ್‌ಡಿಎಫ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು ಮತ್ತು ಯುಡಿಎಫ್ ಸರ್ಕಾರದ ಮೂಲಕ ಕೇರಳಕ್ಕೆ ಹೊಸ ಅಭಿವೃದ್ಧಿ ತರುವುದಾಗಿ ಭರವಸೆ ನೀಡಿದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಯುಡಿಎಫ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ, ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡುತ್ತೇವೆ: ಡಿ.ಕೆ. ಶಿವಕುಮಾರ್

April 6, 2026

ಭುವನೇಶ್ವರ್ ಕುಮಾರ್ IPLನಲ್ಲಿ 200 ವಿಕೆಟ್‌ಗಳ ಮೈಲುಗಲ್ಲು;

April 6, 2026

ರಗ್ಬಿ ಪ್ರೀಮಿಯರ್ ಲೀಗ್‌ನ 2ನೇ ಆವೃತ್ತಿ ಜೂನ್ 16ರಿಂದ 28ರವರೆಗೆ ಹೈದರಾಬಾದ್‌ನಲ್ಲಿ

April 6, 2026

ಡಬಲ್ ಒಲಿಂಪಿಕ್ ಪದಕ ವಿಜೇತ ಬ್ಲಾಂಕಾ ವ್ಲಾಶಿಕ್ ಟಿಸಿಎಸ್ ವರ್ಡ್ 10ಕೆ ಬೆಂಗಳೂರು 2026ರ ಅಂತರಾಷ್ಟ್ರೀಯ ಈವೆಂಟ್ ಅಂಬಾಸಡರ್

April 6, 2026

Recent News

ಕರ್ನಾಟಕದಲ್ಲಿ ಜನಗಣತಿ 2027ರ ಮೊದಲ ಹಂತ: ಇಂದಿನಿಂದ ಸ್ವಯಂ-ಗಣತಿ ಪ್ರಾರಂಭ

April 1, 2026

ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಿಸಿದ ಕರ್ನಾಟಕ ಪೊಲೀಸ್ ಡಿಜಿಪಿ ಡಾ. ಎಂ.ಎ. ಸಲೀಂ

April 1, 2026

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮೊಬೈಲ್ ಮೂಲಕ ಸ್ವಯಂ ಜನಗಣತಿ ದಾಖಲಾತಿ ಪೂರ್ಣಗೊಳಿಸಿದರು

April 1, 2026

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭದ್ರತಾ ವ್ಯವಹಾರಗಳ ಸಂಪುಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ

April 1, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.