ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ರಾಜಣ್ಣ ಅವರ ರಾಜೀನಾಮೆ ವಿಚಾರದ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ವಿಧಾನಸಭೆಯ ಮೊಗಸಾಲೆಯಲ್ಲಿರುವ ಮುಖ್ಯಮಂತ್ರಿಯ ಕಚೇರಿಯಲ್ಲಿ ಈ ಭೇಟಿ ನಡೆದಿದ್ದು, ರಾಜಣ್ಣ ಅವರ ರಾಜೀನಾಮೆ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಕೆ ಶಿವಕುಮಾರ್ ಅವರು ಸಿಎಂ ಜೊತೆಗಿನ ಭೇಟಿಯಲ್ಲಿ ರಾಜಣ್ಣ ಅವರ ರಾಜೀನಾಮೆಯಿಂದ ಉಂಟಾಗಬಹುದಾದ ರಾಜಕೀಯ ಪರಿಣಾಮಗಳ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ ಎನ್ನಲಾಗಿದೆ. ಈ ಭೇಟಿಯು ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಬಹುದು ಎಂದು ರಾಜಕೀಯ ವಿಶ್ಲೇಷಕರು ಭಾವಿಸಿದ್ದಾರೆ.