ಬಿಡದಿಯ ಕೇತಗನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಖಡಕ್ ಆದೇಶ ಹೊರಡಿಸಿದ್ದು, ಕಂದಾಯ ಇಲಾಖೆ ಇಂದು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದೆ.
ಸರ್ವೇ ನಂ. 7, 8, 9, 10, 16, 17 ಮತ್ತು 79ರಲ್ಲಿ ಒತ್ತುವರಿ ಆರೋಪ ಕೇಳಿಬಂದಿದ್ದು, ಸುಮಾರು 14 ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಉಪಯೋಗಿಸಲಾಗಿದೆ ಎಂಬ ಆರೋಪ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಮತ್ತು ಸರ್ವೇ ಇಲಾಖೆ ಜಂಟಿಯಾಗಿ ಸರ್ವೇ ನಡೆಸಿ, ಅದರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದವು. ಇಂದು, ಅದನ್ನಾಧರಿಸಿ ಕಂದಾಯ ಇಲಾಖೆ ತೆರವು ಕಾರ್ಯಾಚರಣೆಗೆ ಮುಂದಾಗಿದೆ.
ಜೆಡಿಎಸ್ ನಾಯಕ ಸುರೇಶ್ ಬಾಬು ವಿರೋಧ
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಈ ಕಾರ್ಯಾಚರಣೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಇದು ದ್ವೇಷದ ರಾಜಕಾರಣ. ಸರ್ಕಾರ ಯಾವುದೇ ನೋಟೀಸ್ ನೀಡದೆ ನೇರವಾಗಿ ತೆರವು ಕಾರ್ಯಾಚರಣೆ ನಡೆಸುತ್ತಿದೆ. ಕುಮಾರಸ್ವಾಮಿ ಕಾನೂನಿನ ಮೇಲೆ ನಂಬಿಕೆ ಇಟ್ಟು ರಾಜಕೀಯ ಪ್ರಭಾವ ಬಳಸಲಿಲ್ಲ. ಈಗ ನಾವು ಪ್ರತಿಬಂಧಿಸಬೇಕು ಎಂದರೆ ಸರ್ಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ,” ಎಂದು ಹೇಳಿದ್ದಾರೆ.
ಹೆಚ್.ಎಂ. ರೇವಣ್ಣ ವಿರುದ್ಧ ಹಲ್ಲೆ ಆರೋಪ
ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆ ನಂದಿನಿ ನಾಗರಾಜ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರ ವಿರುದ್ಧ ಹಲ್ಲೆ ಆರೋಪ ಹೊರಿಸಿದ್ದಾರೆ. ಅವರು ನಿನ್ನೆ ಕೆಕೆ ಗೆಸ್ಟ್ ಹೌಸ್‌ನಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಗೆ ಸಹ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.