ಪಾರ್ಲಿಮೆಂಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿರುವುದಕ್ಕೆ ರಾಜಕೀಯ ನಾಯಕರಿಂದ ಪ್ರತ್ಯೇಕ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಸೂದೆ ಅನುಮೋದನೆಗೆ ಬೆಂಬಲ ನೀಡಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.
“ನಾವು ನಿರೀಕ್ಷೆ ಮಾಡಿದಂತೆ ಪಾರ್ಲಿಮೆಂಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದೆ. ಇದಕ್ಕೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಕೆಲಸ ಮಾಡಲಾಗಿದೆ. ಅಮಿತ್ ಶಾ ಮತ್ತು ಮೋದಿಗೆ ಅಭಿನಂದನೆ ಸಲ್ಲಿಸುತ್ತೇವೆ,” ಎಂದು ಅವರು ಹೇಳಿದ್ದಾರೆ.
ವಿಪಕ್ಷ ನಾಯಕ ಆರ್. ಅಶೋಕ್ ಕೂಡ ಮಸೂದೆ ಪಾಸಾಗಿರುವುದಕ್ಕೆ ಸ್ವಾಗತ ವ್ಯಕ್ತಪಡಿಸಿದ್ದು, “ನಾವು ಕೂಡ ಒಂದು ತಿಂಗಳು ಹೋರಾಟ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಈ ಮಸೂದೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಂದಿತ್ತು. ಆದರೆ ಈಗ ತಿದ್ದುಪಡಿ ಮಾಡಿ ರೈತರ ಹಿತವನ್ನು ಎತ್ತಿಹಿಡಿಯುವ ಕೆಲಸ ಮಾಡಲಾಗಿದೆ. ಇದರಿಂದ ಕರ್ನಾಟಕದ ಜನ ನೆಮ್ಮದಿಯಿಂದ ಬದುಕಲು ಅವಕಾಶ ಸಿಕ್ಕಿದೆ,” ಎಂದು ಅವರು ಹೇಳಿದ್ದಾರೆ.