Wednesday, March 18, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ

amiro by amiro
1 year ago
Reading Time: 1 min read
A A
18
SHARES
50
VIEWS

ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ನಿರ್ಮಾಣ ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವೆಚ್ಚ ಮಾಡಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, “2015-16ನೇ ಸಾಲಿನ ಬಜೆಟ್ಟಿನಲ್ಲಿ ವಿಜಯಪುರವೂ ಸೇರಿದಂತೆ ರಾಜ್ಯದ ಹಲವೆಡೆ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ ಸ್ಥಾಪಿಸಲು ಘೋಷಣೆ ಮಾಡಲಾಗಿತ್ತು. ಆದರೆ ಅನೇಕ ಕಾರಣಗಳಿಂದಾಗಿ ಈ ಯೋಜನೆ ಅನುಷ್ಠಾನಗೊಳ್ಳಲಿಲ್ಲ. ಈಗ ₹12.88 ಕೋಟಿಗೆ ಪರಿಷ್ಕೃತ ಅಂದಾಜು ಪಟ್ಟಿ ಸಿದ್ಧಪಡಿಸಿದ್ದು, ಇದಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮೂಲಕ ಈ ಯೋಜನೆ ಕಾರ್ಯಗತಗೊಳ್ಳಲಿದೆ.” ಎಂದರು.

ವಿಜ್ಞಾನ ಕೇಂದ್ರದ ಅವಶ್ಯಕತೆ: ವಿಜಯಪುರದಲ್ಲಿ ಈ ಯೋಜನೆಯ ಕಾಮಗಾರಿಗೆ ಇದುವರೆಗೆ ₹1.44 ಕೋಟಿ ವೆಚ್ಚವಾಗಿದೆ. ತಾರಾಲಯದಲ್ಲಿ ಡೋಮ್, ಪ್ರೊಜಕ್ಷನ್ ಸಿಸ್ಟಂ, ಒಳಾಂಗಣ ಮತ್ತು ಹೊರಾಂಗಣ ವಿಜ್ಞಾನ ಪ್ರದರ್ಶನೆಗಳು, ಆಡಿಯೋ ವ್ಯವಸ್ಥೆ, ಹವಾ ನಿಯಂತ್ರಣ ವ್ಯವಸ್ಥೆ ಎಲ್ಲವೂ ಇರಲಿವೆ. ಇದರ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ತಿಳಿವಳಿಕೆಯನ್ನು ಹೆಚ್ಚಿಸಲಾಗುವುದು. ನನೆಗುದಿಗೆ ಬಿದ್ದಿದ್ದ ಈ ಯೋಜನೆಯನ್ನು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾಗಿ ಸಚಿವರು ತಿಳಿಸಿದ್ದಾರೆ.

ವಸತಿ ಶಾಲೆಗಳಿಗೆ ₹44 ಕೋಟಿ ಅನುದಾನ: ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಮದಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ ಮತ್ತು ವಿಜಯಪುರದಲ್ಲಿರುವ ವಸತಿಸಹಿತ ಪದವಿಪೂರ್ವ ಕಾಲೇಜಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ತಲಾ ₹22 ಕೋಟಿ ರೂ.ಗಳಂತೆ ಒಟ್ಟು ₹44 ಕೋಟಿ ರೂ. ಅನುದಾನ ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ.

ವಿದ್ಯಾರ್ಥಿಗಳಿಗೆ ಹೊಸ ಸೌಲಭ್ಯಗಳು: ಈ ಎರಡೂ ವಸತಿ ಶಾಲೆಗಳು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೀಸಲಾಗಿದ್ದು, ತಲಾ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರಸ್ತುತ, ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಗಳಿಗೆ ಸೂಕ್ತ ಮೂಲಸೌಕರ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೊಸ ಕಟ್ಟಡಗಳಲ್ಲಿ ಶಾಲಾ ಕಟ್ಟಡ, ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್, ಭೋಜನಾಲಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಸತಿ ಗೃಹಗಳು, ರಂಗಮಂದಿರ, ಕಾಂಪೌಂಡ್, ಸೋಲಾರ್ ವಾಟರ್ ಹೀಟರ್, ಒಳಚರಂಡಿ ವ್ಯವಸ್ಥೆ ಮುಂತಾದವು ನಿರ್ಮಾಣಗೊಳ್ಳಲಿವೆ ಎಂದು ಅವರು ವಿವರಿಸಿದರು.

ರಾಜ್ಯ ಮಟ್ಟದಲ್ಲಿ ವಸತಿ ಶಾಲೆಗಳ ಅಭಿವೃದ್ಧಿ: ರಾಜ್ಯದಲ್ಲಿರುವ 61 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಒಟ್ಟು ₹1292.50 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದರ ಭಾಗವಾಗಿ, ವಿಜಯಪುರ ಜಿಲ್ಲೆಯ ಈ ಎರಡು ಶಾಲೆಗಳಿಗೂ ಅನುದಾನ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

Tags: ಕೇಂದ್ರಡಿದರ್ಶನಯೋಜನೆಸಚಿವಸಂಪುಟಸಭೆ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಕೆ.ಹೆಚ್. ಪಾಟೀಲರು ನನಗೆ ಮೊದಲ ಬಿ-ಫಾರಂ ನೀಡಿ ಅವಕಾಶ ಕಲ್ಪಿಸಿದರು ಡಿ.ಕೆ. ಶಿವಕುಮಾರ್:

March 17, 2026

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಸಾಲದ ಹೊರೆ ಹೆಚ್ಚಳ: ವಿಜಯೇಂದ್ರ ಯಡಿಯೂರಪ್ಪ ತೀವ್ರ ಟೀಕೆ

March 16, 2026

FKCCI ಇನ್ನೋ ಮಂಥನ್ 2026:

March 16, 2026

ಕರ್ನಾಟಕದ ಸ್ನಿಗ್ಧಾ ಕಾಂತಾ ITF J60 ಗುರುಗ್ರಾಮ್‌ನಲ್ಲಿ ಗರ್ಲ್ಸ್ ಸಿಂಗಲ್ಸ್ ಟೈಟಲ್ ಗೆದ್ದರು

March 14, 2026

Recent News

ಕರ್ನಾಟಕದಲ್ಲಿ ಮಿಂಚಿದ ವೈಷ್ಣವಿ ಆಡ್ಕರ್‌: ಕಲಬುರಗಿ ಐಟಿಎಫ್ W35 ಕಿರೀಟ ಗೆಲುವು

March 11, 2026

IRCTCಯು ಕರ್ನಾಟಕ ಭಾರತ ಗೌರವ ಕಾಶಿ ದರ್ಶನ ಯಾತ್ರೆಯಲ್ಲಿ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ

March 11, 2026

ಪ್ರಧಾನಿ ಮೋದಿ ಮಾರ್ಚ್ 6ರಂದು “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ವಿಷಯದ ಪೋಸ್ಟ್ ಬಜೆಟ್ ವೆಬಿನಾರ್‌ನಲ್ಲಿ ಭಾಷಣ ಮಾಡಲಿದ್ದಾರೆ

March 5, 2026

ಮಾನವೀಯ ಮೌಲ್ಯಗಳಿಗೆ ಭಾರತೀಯ ಆಧ್ಯಾತ್ಮಿಕ ಸಂಪ್ರದಾಯಗಳು ದಾರಿದೀಪ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

March 5, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.