ನವದೆಹಲಿ: ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ನವದೆಹಲಿಯಲ್ಲಿ ಭೇಟಿಯಾಗಿ, ತಮ್ಮ ಕುಟುಂಬದ ವಿವಾಹ ಮಹೋತ್ಸವಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಸೇರಿದಂತೆ ಕುಟುಂಬದ ಅನೇಕ ಸದಸ್ಯರು ಹಾಜರಿದ್ದರು.
ಪ್ರಧಾನಿ ಮೋದಿ ದೇಶದ ವಿಕಾಸಕ್ಕಾಗಿ ತಪಸ್ವಿಯಂತೆ ಶ್ರಮಿಸುತ್ತಿದ್ದಾರೆ ಮತ್ತು ಅವರ ಮಾರ್ಗದರ್ಶನ ಕಾರ್ಯಕರ್ತರಿಗೆ ಅಪಾರ ಚೈತನ್ಯ ತುಂಬುತ್ತದೆ ಎಂದು ವಿಜಯೇಂದ್ರ ಯಡಿಯೂರಪ್ಪ ಹಂಚಿಕೊಂಡಿದ್ದಾರೆ. ಈ ಭೆಟ್ಟಿಯ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.