ಬೆಂಗಳೂರು: ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು.
ವಯೋ ವೃದ್ಧರಿಗಾಗಿ “ವಯೋ ವಂದನಾ ಯೋಜನೆ” ಜಾರಿಮಾಡಲಾಗಿದೆ – ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು, ಮಾರ್ಚ್ 06 (ಕರ್ನಾಟಕ ವಾರ್ತೆ):
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ವಯೋ ವಂದನಾ ಯೋಜನೆಯು ಒಂದಾಗಿದ್ದು 70 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿಗೆ ರೂ.5.00ಲಕ್ಷಗಳ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವ ಯೋಜನೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಸದಸ್ಯರಾದ ವೇದವ್ಯಾಸ ಕಾಮತ್ ಡಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ 1650 ಚಿಕಿತ್ಸಾ ವೆಚ್ಚಗಳಲ್ಲಿ 294 ಸಾಮಾನ್ಯ/ಸರಳ ಚಿಕಿತ್ಸಾ ವಿಧಾನಗಳು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿದ್ದು 251 ಕ್ಲಿಷ್ಟಕರ ದ್ವಿತೀಯ ಹಂತದ ಚಿಕಿತ್ಸಾ ವಿಧಾನಗಳು, 934 ತೃತೀಯ ಹಂತದ ಚಿಕಿತ್ಸಾ ವಿಧಾನಗಳು ಮತ್ತು 171 ತುರ್ತು ಚಿಕಿತ್ಸಾ ವಿಧಾನಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಯಲ್ಲಿ ಪಡೆಯಬಹುದಾಗಿದೆ. ಲಭ್ಯವಿಲ್ಲದ ಚಿಕಿತ್ಸಾ ವಿಧಾನಗಳಿಗೆ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಹೇಳಿದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಹೆಚ್‍ಬಿಪಿ2022 ಪ್ಯಾಕೇಜನ್ನು ಅನುಷ್ಠಾನಗೊಳಿಸಲು ಸರ್ಕಾರದ ಪರಿಶೀಲನೆಯಲ್ಲಿರುತ್ತದೆ. ಈ ಪ್ಯಾಕೇಜ್ ಅಡಿ ಒಟ್ಟು 1953 ಚಿಕಿತ್ಸಾ ವಿಧಾನಗಳು ಲಭ್ಯವಾಗಲಿವೆ. ABRK ಯೋಜನೆಯು 1 ಕೋಟಿ 12 ಲಕ್ಷ ಕುಟುಂಬಗಳಿಗಾಗಿ ಇರುವ ಯೋಜನೆಯಾಗಿದ್ದು 60:40 ರನುಸಾರ ಕೇಂದ್ರ ಸರ್ಕಾರದ ಶೇಕಡಾ 60 ರಷ್ಟು ರಾಜ್ಯ ಸರ್ಕಾರದ 40% ಚಿಕಿತ್ಸಾ ವೆಚ್ಚ ಭರಿಸಬೇಕಾಗಿದೆ. ಕೇಂದ್ರ ಸರ್ಕಾರದಿಂದ ಇದೂವರೆಗೆ ಅನುದಾನ ಬಂದಿರುವುದಿಲ್ಲ. ಸದರಿ ಯೋಜನೆಗೆ ವಾರ್ಷಿಕ 68.98ಕೋಟಿ ಅನುದಾನ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಆಯುಷ್ಮಾನ್ ಭಾರತ್ ಕೇಂದ್ರ ಸರ್ಕಾರದ ಯೋಜನೆಯಾಗಿದ್ದರೂ ಶೇಕಡಾ 70ರಷ್ಟು ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರ ಸರ್ಕಾರಕ್ಕೆ ಈ ಕುರಿತು ಪತ್ರ ಬರೆಯಲಾಗಿದ್ದು ಇದೂವರೆಗೂ ಕೇಂದ್ರ ಸರ್ಕಾರದಿಂದ ಉತ್ತರ ಬಂದಿರುವುದಿಲ್ಲ. ಕೇಂದ್ರದಿಂದ ಉತ್ತರ ಬಂದಮೇಲೆ ಈ ಯೋಜನೆ ಕುರಿತು ವಿಸ್ತಾರವಾಗಿ ತಿಳಿಸಬಹುದಾಗಿದೆ.
ಎಬಿಆರ್‍ಕೆ ಯೋಜನೆ ಹಾಲಿ ಸರಾಗವಾಗಿ ನಡೆಯುತ್ತಿದೆ. 582 ಆಸ್ಪತ್ರೆಗಳು ಎಂಪಾನಲ್ ಆಗಿವೆ. ಕೆಲವು ಕಾಯಿಲೆಗಳು ಇದರಡಿ ಸೇರಿರುವುದಿಲ್ಲ. ಎಂಪಾನಲ್ ಆಗಿರುವ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚದ ಬಿಲ್‍ಗಳ ಮೊತ್ತವನ್ನು 30 ದಿನಗಳೊಳಗಾಗಿ ಪಾವತಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಶೀಘ್ರವಾಗಿ ಪಾವತಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಮಂಗನ ಖಾಯಿಲೆ ತಡೆಗಟ್ಟಲು ಮುಂಜಾಗ್ರತ ಕ್ರಮ – ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು, ಮಾರ್ಚ್ 06 (ಕರ್ನಾಟಕ ವಾರ್ತೆ):
ಮಂಗನ ಕಾಯಿಲೆ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇರುವುದಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಿ, ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಇದರಿಂದ ಅನೇಕ ರೋಗಿಗಳು ಯಾವುದೇ ತೊಂದರೆಗಳಿಲ್ಲದೇ ಮಂಗನ ಕಾಯಿಲೆ ಸೋಂಕಿನಿಂದ ಚೇತರಿಸಿಕೊಳ್ಳತ್ತಾರೆ. ಈ ಖಾಯಿಲೆಯು ಬೇಸಿಗೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಂಗನ ಕಾಯಿಲೆಯಿಂದ ಸಾವುಗಳು ಸಂಭವಿಸದಂತೆ ಮುಂಜಾಗ್ರತ ಕ್ರಮಗಳನ್ನು ವಹಿಸಲಾಗಿದೆ. ಈ ರೋಗಕ್ಕೆ ಯಾವುದೇ ಲಸಿಕೆ ಇರುವುದಿಲ್ಲ. ಈ ಹಿಂದೆ ಇದ್ದ ಲಸಿಕೆ ಕ್ಷಮತೆ ಕಳೆದುಕೊಂಡಿದೆ. ಈಗಾಗಲೇ ಐಸಿಎಂಆರ್ ಜೊತೆ ಚರ್ಚೆ ಮಾಡಿ ನಿರಂತರ ಸಂಪರ್ಕದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಹಾಗೂ ಲಸಿಕಾಗೆ ಸಂಶೋಧನೆ ಕಾರ್ಯ ನಡಿಯುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಸದಸ್ಯರಾದ ಅರಗ ಜ್ಞಾನೇಂದ್ರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ 674 ಖಚಿತ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಯವರೆಗೆ ಯಾವುದೇ ಖಚಿತ ಡೆಂಗ್ಯೂ ಮರಣ ಪ್ರಕರಣಗಳು ವರದಿಯಾಗಿರುವುದಿಲ್ಲ. ಪ್ರಸಕ್ತ ಸಾಲಿನಲ್ಲಿ ಮಂಗನ ಕಾಯಿಲೆ ಸೊಂಕಿತ ಓರ್ವ ಮಹಿಳೆ ಮೃತಪಟ್ಟಿದ್ದು, ಮಹಿಳೆ ಅನ್‍ಕಂಟ್ರೋಲ್ಡ್ ಬಿ.ಪಿ ಮತ್ತು ಮಧುಮೇಹ ಜೊತೆಗೆ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ವರದಿಯಿಂದ ತಿಳಿದುಬಂದಿರುತ್ತದೆ.
ಮುಂದಿನ ವರ್ಷದೊಳಗೆ ಮಂಗನ ಕಾಯಿಲೆಗೆ ಲಸಿಕೆ ಕಾರ್ಯ ಸಂಪೂರ್ಣವಾಗಲಿದೆ. ಮಂಗನ ಕಾಯಿಲೆ ಪೀಡಿತ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಡಲಾಗಿದೆ ಅಲ್ಲದೇ, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಮೊಬೈಲ್ ಯುನಿಟ್ ಗಳನ್ನು ನೀಡಲಾಗುವುದು. ಡಾಕ್ಟರ್ ಗಳ ಕೊರತೆಯನ್ನು ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಸಚಿವರು ವಿಧಾನಸಭೆಯಲ್ಲಿ ತಿಳಿಸಿದರು.
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ – ಸಚಿವ – ಡಾ. ಶರಣಪ್ರಕಾಶ್ ಪಾಟೀಲ
ಬೆಂಗಳೂರು, ಮಾರ್ಚ್ 06 (ಕರ್ನಾಟಕ ವಾರ್ತೆ):
ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹಳೆಯ ಜಿಲ್ಲಾ ಆಸ್ಪತ್ರೆಯ ಕಟ್ಟಡವನ್ನು ನೆಲಸಮಗೊಳಿಸಿ ಇದೇ ಜಾಗದಲ್ಲಿ 300 ಹಾಸಿಗೆಗಳ ಸೂಪರ್ ಸ್ಪೆμÁಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಿಕೊಡಲಾಗಿದೆ. ಅನುದಾನದ ಲಭ್ಯತೆಯನ್ನು ಆಧರಿಸಿ ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಇಂದು ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಮಟಾ ಶಾಸಕರಾದ ದಿನಕರ್ ಕೇಶವಶೆಟ್ಟಿ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಸೂಪರ್ ಸ್ಪೆμÁಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ಭೂಮಿಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹಸ್ತಾಂತರವಾಗಿರುವುದಿಲ್ಲ ಮತ್ತು ಸದರಿ ಪ್ರಸ್ತಾವನೆಗೆಗೆ ಯಾವುದೇ ರೀತಿಯ ಅನುದಾನ ಮಂಜೂರಾಗಿರುವುದಿಲ್ಲ.
ಕಾರವಾರದಲ್ಲಿ ಸೂಪರ್ ಸ್ಪೆμÁಲಿಟಿ ಆಸ್ಪತ್ರೆಗೆ ಬೇಡಿಕೆ ಇದ್ದು ಈಗಾಗಲೇ ಇಲಾಖೆಯಿಂದ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ರೈತರ ಪಂಪ್ ಸೆಟ್ ಗಳಿಗೆ ದಿನವಹಿ 07 ಗಂಟೆಗಳ ಕಾಲ 3 ಪೇಸ್ ವಿದ್ಯುತ್ ಸರಬರಾಜು – ಸಚಿವ ಕೆ..ಜೆ ಜಾರ್ಜ್
ಬೆಂಗಳೂರು, ಮಾರ್ಚ್ 06 (ಕರ್ನಾಟಕ ವಾರ್ತೆ):
ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ ನ್ನು ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಾಧ್ಯತೆ ಇಲ್ಲದಿರುವ ವಿದ್ಯುತ್ ಉಪ ಕೇಂದ್ರಗಳಿಂದ ಪಾಳಿಯಲ್ಲಿ ಹಗಲಿನ ವೇಳೆಯಲ್ಲಿ 4 ಗಂಟೆಗಳ ಕಾಲ ಹಾಗೂ ರಾತ್ರಿಯ ವೇಳೆಯಲ್ಲಿ 3 ಗಂಟೆಗಳ ಕಾಲ ಒಟ್ಟು 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ. ಅರಣ್ಯ ಪ್ರದೇಶದ ಮೂಲಕ ಹಾದುಹೋಗುವ ಕೃಷಿ ಫೀಡರ್ ಗಳಿಗೆ ಹಗಲಿನ ವೇಳೆಯಲ್ಲಿಯೇ 7 ಗಂಟೆಗಳ ಕಾಲ ನಿರಂತರವಾಗಿ 3 ಪೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆÉ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕರಾದ ಸುರೇಶ್ ಕುಮಾರ್ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಫಾರ್ಮ್ ಹೌಸ್ ಗಳನ್ನು ಹೊಂದಿರುವ ಎಲ್ಲಾ ಕೃಷಿ ಪೀಡರ್ ಗಳಿಗೆ ಒಎಲ್‍ಪಿ-ರಿಲೇಗಳ್ನು ಬಳಸಿಕೊಂಡು ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಸಿಂಗಲ್ ಫೇಸ್ ವಿದ್ಯುತ್ ಸರಬರಾಜು ವ್ಯವಸ್ಥೆ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ. ಫಾರ್ಮ್ ಹೌಸ್ ಗಳ ಅಗತ್ಯಕ್ಕೆ ತಕ್ಕಂತೆ ಮತ್ತು ಸಾಕಷ್ಟು ವಿದ್ಯುತ್ ಅಗತ್ಯವನ್ನು ಪೂರೈಸುವ ದೃಷ್ಟಿಯಿಂದ ಮತ್ತ ಫಾರ್ಮ್ ಹೌಸ್‍ಗಳ ಸಂಖ್ಯೆ ಹಾಗೂ ಮಂಜೂರಾದ ಲೋಡ್‍ಗಳನ್ನು ಗಮನದಲ್ಲಿಟ್ಟುಕೊಂಡು ಒಎಲ್‍ಪಿ- ರಿಲೇಗಳಲ್ಲಿ ಗರಿಷ್ಠ ವಿದ್ಯುತ್ 10 ಎಎಂಪಿಎಸ್ ಸೆಟ್ಟಿಂಗ್ ಮಾಡಲಾಗಿದೆ ಹಾಗೂ ಎಲ್ಲೆಲ್ಲಿ ಫಾರ್ಮ್ ಹೌಸ್ ಗಳ ಸಂಖ್ಯೆ ಮತ್ತು ಮಂಜೂರಾದ ಲೋಡ್ ಹೆಚ್ಚಿರುತ್ತದೆಯೋ ಅಂತಹ ಕೃಷಿ ಫೀಡರ್ ಗಳಲ್ಲಿ ವಿದ್ಯುತ್ ಮಿತಿಯನ್ನು 10 ಎಎಂಪಿಎಸ್ ನಿಂದ 20 ಎಎಂಪಿಎಸ್ ಗೆ ಹೆಚ್ಚಿಸಲಾಗಿದೆ ಎಂದರು.
ಪಂಪ್ ಸೆಟ್‍ಗಾಗಿ 4.50 ಲಕ್ಷ ಅರ್ಜಿಗಳು ಸ್ವೀಕಾರವಾಗಿದ್ದು ಅದರಲ್ಲಿ ಈಗಾಗಲೇ 2.50 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹಂತ ಹಂತವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು. ರೈತರು ವಿದ್ಯುತ್ ಗೆ ಸಂಬಂಧಿಸಿದಂತೆ ಟೋಲ್ ಪ್ರೀ ನಂಬರ್ 1912 ಗೆ ರೈತರ ಕರೆ ಮಾಡಿ ದೂರು ನೀಡಬಹುದಾಗಿದೆ. ಕರೆಯು ರೆಕಾರ್ಡ್ ಆಗುವುದರಿಂದ ಸಮಸ್ಯೆಗೆ ಶೀಘ್ರವಾಗಿ ಪರಿಹಾರ ದೊರಕಲಿದೆ. ದೂರು ನೀಡಿದ್ದಲ್ಲಿ ತಕ್ಷಣವೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಅಲೋಪತಿ ವೈದ್ಯಾಧಿಕಾರಿಗಳ ಸರಿಸಮವಾಗಿ ಆಯುμï ವೈದ್ಯರುಗಳಿಗೆ ವೇತನ ಪಾವತಿಗೆ ಕ್ರಮ – ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು, ಮಾರ್ಚ್ 06 (ಕರ್ನಾಟಕ ವಾರ್ತೆ):
ಆಯುμï ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರುಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಅಲೋಪತಿ ವೈದ್ಯರುಗಳಿಗೆ ನೀಡಲಾಗುತ್ತಿರುವ ವೇತನ ಶ್ರೇಣಿ, ವೇತನ ಭತ್ಯೆ ಸೌಲಭ್ಯ ಮತ್ತು ಸ್ಥಾನಮಾನಗಳನ್ನು ಸಮಾನಾಂತರವಾಗಿ ವಿಸ್ತರಿಸಿ ಕಾಲ ಕಾಲಕ್ಕೆ ಸಮಾನತೆ ಕಾಪಾಡುವ ಸರ್ಕಾರದ ನೀತಿ ವಿಷಯಕ್ಕೆ ಅನುಮೋದನೆ ನೀಡಲಾಗಿದೆ ಹಾಗೂ ವೇತನ ಮತ್ತು ಭತ್ಯೆಗಳಿಗೆ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ರಿಜ್ವಾನ್ ಅರ್ಷದ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆದೇಶ ಸಂಖ್ಯೆ :ಆಕುಕ ಪಿಐಯಂ 2016 ದಿನಾಂಕ: 18-18-2016ರನ್ವಯ ಅಲೋಪತಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ವೈದ್ಯರಿಗೆ 2016ರಲ್ಲಿ ನೀಡಿದ ಪರಿಷ್ಕøತ ವಿಶೇಷ ಭತ್ಯೆಯನ್ನು ಆಯುμï ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ವೈದ್ಯರಿಗೂ ವಿಸ್ತರಿಸಲಾಗಿದೆ. ಪ್ರಸ್ತುತ ಇಲಾಖೆಯಲ್ಲಿ 180 ಖಾಯಂ ವೈದ್ಯರುಗಳು ಸ್ನಾತಕೋತ್ತರ ಪದವಿ ಪಡೆದು ಸೇವೆ ಸಲ್ಲಿಸುತ್ತಿದ್ದು, ಇವರುಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಆಯುμï ಆಸ್ಪತ್ರೆಗಳಲ್ಲಿ ತೈನಾತಿಸಿಕೊಂಡು ಸಾರ್ವಜನಿಕರಿಗೆ ಪೂರ್ಣ ಪ್ರಮಾಣದ ವಿವಿಧ ತಜ್ಞತೆ ಅನುಸಾರ ಸೇವೆಯನ್ನು ನೀಡುವ ಬಗ್ಗೆ ನಿಯಮಗಳನುಸಾರ ಕ್ರಮ ವಹಿಸಲಾಗುತ್ತಿದೆ. ವೇತನ ಮತ್ತು ಭತ್ಯೆಗಳಿಗೆ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಸಚಿವರು ಉತ್ತರಿಸಿದರು