ಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ 66ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯ ಸಭೆಯಲ್ಲಿ ಬಂಡವಾಳ ಹೂಡಿಕೆ ಉತ್ತೇಜನಕ್ಕಾಗಿ ಸಮಗ್ರ ಏಕಗವಾಕ್ಷಿ ವ್ಯವಸ್ಥೆ ಮತ್ತು ವ್ಯಾಪಾರ ಒಪ್ಪಿಗೆ ನೀಡಿಕೆ ವ್ಯವಸ್ಥೆಯ ಸರಳೀಕರಣದ ಕುರಿತು ಚರ್ಚೆ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ರಾಜ್ಯದ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.
ರಾಜ್ಯದಲ್ಲಿ ವ್ಯಾಪಾರ ಸೌಲಭ್ಯವನ್ನು ಸುಧಾರಿಸಲು ಮತ್ತು ಹೂಡಿಕೆದಾರರಿಗೆ ಸರಳವಾದ, ಪಾರದರ್ಶಕ ವ್ಯವಸ್ಥೆಯನ್ನು ಒದಗಿಸಲು ಸಭೆಯಲ್ಲಿ ಪ್ರಮುಖ ಒತ್ತು ನೀಡಲಾಯಿತು. ಏಕಗವಾಕ್ಷಿ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಒಪ್ಪಿಗೆ ಪ್ರಕ್ರಿಯೆಯನ್ನು ವೇಗಗೊಳಿಸುವ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಈ ಸಭೆಯು ರಾಜ್ಯದ ಆರ್ಥಿಕ ಬೆಳವಣಿಗೆಗೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.












