ಬೀದರ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೀದರ್ ಜಿಲ್ಲೆಯ ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.
ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಚಿವರು, 7 ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್‌ಗಳು, 5 ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‌ಗಳು ಹಾಗೂ 7 ಶ್ರವಣದೋಷ ಇರುವವರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬಡೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸವಲತ್ತು ವಿತರಣೆಯು ವಿಶೇಷ ಚೇತನರ ಸಬಲೀಕರಣಕ್ಕೆ ಮತ್ತು ಅವರ ಶೈಕ್ಷಣಿಕ ಹಾಗೂ ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ.