ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾದ ವಿಶ್ವ ಯುವ ಕೌಶಲ್ಯ ದಿನಾಚರಣೆ ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಕರ್ನಾಟಕ ರಾಜ್ಯ ಶುಶೂಷಾ ಪರಿಷತ್ತು (KSNC) ವತಿಯಿಂದ ಆಧಾರ್ ಮತ್ತು ಡಿಜಿಲಾಕರ್ ಇ-ಕೆವೈಸಿ ಮೂಲಕ ಶುಶೂಷಾ ಸಮೂಹದವರಿಗೆ ನೋಂದಣಿ ಪ್ರಮಾಣಪತ್ರಗಳನ್ನು ವಿತರಿಸುವ ತಂತ್ರಜ್ಞಾನದ ಲೋಕಾರ್ಪಣೆಯನ್ನೂ ಸಹ ಮುಖ್ಯಮಂತ್ರಿಗಳು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಿವಕಾಂತಮ್ಮ ನಾಯಕ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವು ಯುವ ಜನತೆಯ ಕೌಶಲ್ಯವನ್ನು ಗುರುತಿಸಿ ಗೌರವಿಸುವುದರ ಜೊತೆಗೆ ಆಧುನಿಕ ತಂತ್ರಜ್ಞಾನದ ಮೂಲಕ ಶುಶೂಷಾ ಕ್ಷೇತ್ರದಲ್ಲಿ ಸೇವೆಯ ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.